ಕಿಮ್ಮನೆ ರತ್ನಾಕರ 
ರಾಜ್ಯ

ಎಬಿವಿಪಿ ನಾಯಕನಿಂದ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಹಂಚಿಕೆ; ಆರಗ ಜ್ಞಾನೇಂದ್ರ ವಿರುದ್ಧ ಕಿಮ್ಮನೆ ವಾಗ್ದಾಳಿ

ಎಬಿವಿಪಿ ನಾಯಕರೊಬ್ಬರು ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಕುರಿತು ಬಿಜೆಪಿ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗ: ಎಬಿವಿಪಿ ನಾಯಕರೊಬ್ಬರು ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಕುರಿತು ಬಿಜೆಪಿ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರು, ಆ ಅಶ್ಲೀಲ ವಿಡಿಯೋಗಳ ಬಗ್ಗೆ ಆರಗ ಜ್ಞಾನೇಂದ್ರ ನಮಗೆ ಹೇಳಬೇಕು. ನನ್ನ ಮಾಹಿತಿ ಪ್ರಕಾರ, ಎಬಿವಿಪಿ ಅಧ್ಯಕ್ಷರು 30-40 ಹುಡುಗಿಯರ ವಿಡಿಯೋಗಳನ್ನು ಹರಿಬಿಟ್ಟಿದ್ದಾರೆ. ಇದಕ್ಕೆ ಆರಗ ಜ್ಞಾನೇಂದ್ರ ವಿರೋಧ ವ್ಯಕ್ತಪಡಿಸಬೇಕಿತ್ತು. ಮುಸ್ಲಿಮರೇ ಇದನ್ನು ಮಾಡಿದ್ದರೆ, ಅವರು ಇಡೀ ಶಿವಮೊಗ್ಗ ಜಿಲ್ಲೆ ಬಂದ್‌‌ಗೆ ಕರೆ ನೀಡುತ್ತಿದ್ದರು' ಎಂದು ಕಿಡಿಕಾರಿದ್ದಾರೆ.

'ಈಗ, ಅವರು (ಬಿಜೆಪಿ) ಆರೋಪಿಗಳಿಗೆ ಮತ್ತು ಎಬಿವಿಪಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ಎಲ್ಲರೂ ಅದನ್ನೇ ಹೇಳುತ್ತಿದ್ದಾರೆ. ಆರಗ ಜ್ಞಾನೇಂದ್ರ ಅವರು ಕೇಸರಿ ಶಾಲು ಹೊದ್ದು ಆರೋಪಿಯ ಜೊತೆ ಕಾಲೇಜಿನ ಒಳಗೆ ಹೋಗಿ ಪ್ರಚಾರ ಮಾಡಿರುವ ವಿಡಿಯೋವನ್ನು ನಾನೇ ತೋರಿಸಬಲ್ಲೆ. ಅವರು ಅದನ್ನು ಅಲ್ಲಗಳೆಯಬಹುದೇ? ಜ್ಞಾನೇಂದ್ರ ಅವರೇ ಪದವಿ ಕಾಲೇಜಿಗೆ ಅತ್ಯಾಚಾರದ ಆರೋಪಿಯೊಂದಿಗೆ ಹೋಗಿದ್ದರು. ಈಗ ಅವರು ಆರೋಪಿ ಎಬಿವಿಪಿಯ ಸ್ಥಳೀಯ ಅಧ್ಯಕ್ಷನಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ' ಎಂದು ರತ್ನಾಕರ್ ಆರೋಪಿಸಿದ್ದಾರೆ. ಅಲ್ಲದೆ, ಈ ಘಟನೆ ಖಂಡಿಸಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಪದಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದರು.

ಸೋಮವಾರ ಹೇಳಿಕೆ ನೀಡಿರುವ ಪೊಲೀಸರು, ಆರೋಪಿ ಪ್ರತೀಕ್ ಗೌಡ ಎಬಿವಿಪಿ ತೀರ್ಥಹಳ್ಳಿ ಘಟಕದ ಅಧ್ಯಕ್ಷ ಎಂದಿದ್ದಾರೆ. ಆದರೆ, ಬಿಜೆಪಿ ಆರೋಪಿಯು ಎಬಿವಿಪಿಯ ಅಧ್ಯಕ್ಷ ಅಥವಾ ಪದಾಧಿಕಾರಿ ಅಲ್ಲ ಎಂದು ಸಮರ್ಥಿಸಿಕೊಂಡಿದೆ.

ಹಲವು ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಆತ ಅನ್ಯೋನ್ಯವಾಗಿರುವ ದೃಶ್ಯಾವಳಿಗಳು ವಿಡಿಯೋಗಳಲ್ಲಿದ್ದು, ಭಾನುವಾರ ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರು ವಿಡಿಯೋಗಳ ಪ್ರಸಾರದ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಎಸ್. ಮಿಥುನ್ ಕುಮಾರ್ ಅವರನ್ನು ಸಂಪರ್ಕಿಸಿದ್ದಾರೆ. ಆರೋಪಿ ಮತ್ತು ಎಬಿವಿಪಿಯ ಇತರ ಸದಸ್ಯರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆರೋಪಿಯು ಕಾಲೇಜು ವಿದ್ಯಾರ್ಥಿಗಳ ನಗ್ನ ಚಿತ್ರಗಳು ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿದ ಮತ್ತು ಬ್ಲ್ಯಾಕ್ ಮೇಲ್ ಮಾಡಿದ ಆರೋಪವನ್ನು ಹೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಸದಸ್ಯರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಸಂಘಟನೆಯ ಹೆಸರನ್ನು ಬಳಸಿಕೊಂಡು ಆರೋಪಿ ಹುಡುಗಿಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಬಂದಿವೆ ಎಂದು ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT