ಉಮೇಶ್ ರೆಡ್ಡಿ 
ರಾಜ್ಯ

ಬೆಳಗಾವಿ ಹಿಂಡಲಗಾ ಜೈಲಿನಿಂದ ಬೆಂಗಳೂರು ಜೈಲಿಗೆ ವಿಕೃತ ಕಾಮಿ ಉಮೇಶ್ ರೆಡ್ಡಿ ಶಿಫ್ಟ್

ವಿಕೃತಕಾಮಿ ಸರಣಿ ಹಂತಕ ಉಮೇಶ್ ರೆಡ್ಡಿಯನ್ನು ಬೆಳಗಾವಿ ಹಿಂಡಲಗಾ ಜೈಲಿನಿಂದ ಬೆಂಗಳೂರು ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಬೆಂಗಳೂರು: ವಿಕೃತಕಾಮಿ ಸರಣಿ ಹಂತಕ ಉಮೇಶ್ ರೆಡ್ಡಿಯನ್ನು ಬೆಳಗಾವಿ ಹಿಂಡಲಗಾ ಜೈಲಿನಿಂದ ಬೆಂಗಳೂರು ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಉಮೇಶ್ ರೆಡ್ಡಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು 30 ವರ್ಷಗಳ ಶಿಕ್ಷೆಗೆ ಪರಿವರ್ತಿಸಿದ ನಂತರ ಸರಣಿ ಅತ್ಯಾಚಾರಿ ಮತ್ತು ಹಂತಕ ಉಮೇಶ್ ರೆಡ್ಡಿಯನ್ನು ಜೂನ್ 3 ರಂದು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಯಿತು.

2011ರಿಂದ ಹಿಂಡಲಗಾ ಜೈಲಿನಲ್ಲಿದ್ದ,  ಕರ್ನಾಟಕ ಹೈಕೋರ್ಟ್ 2009 ರಲ್ಲಿ ರೆಡ್ಡಿಗೆ ಮರಣದಂಡನೆ ವಿಧಿಸಿತ್ತು, 2011 ರಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಯನ್ನು ಎತ್ತಿಹಿಡಿಯಿತು.

ಆದರೆ 2022 ರಲ್ಲಿ, ಸುಪ್ರೀಂ ಕೋರ್ಟ್ ಅವರನ್ನು 10 ವರ್ಷಗಳ ಕಾಲ ಕಾನೂನುಬಾಹಿರವಾಗಿ ಒಂಟಿಯಾಗಿ ಸೆರೆಮನೆಯಲ್ಲಿ ಇರಿಸಲಾಗಿದೆ ಎಂಬ ಕಾರಣಕ್ಕಾಗಿ ಅವರ ಮರಣದಂಡನೆಯನ್ನು ರದ್ದುಗೊಳಿಸಿತು.

2013 ರಲ್ಲಿ ರಾಷ್ಟ್ರಪತಿಗಳು ಆತನ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವವರೆಗೆ ಉಮೇಶ್ ರೆಡ್ಡಿಯನ್ನು 2016 ರವರೆಗೆ ಒಂಟಿಯಾಗಿ ಸೆರೆಮನೆಯಲ್ಲಿ ಇರಿಸಲಾಯಿತು.

ಮೂಲಗಳ ಪ್ರಕಾರ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಸುಮಾರು 26 ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೈದಿಗಳಿದ್ದಾರೆ. “ಐತಿಹಾಸಿಕವಾಗಿ, ಕರ್ನಾಟಕದಲ್ಲಿ ಮರಣದಂಡನೆ ಶಿಕ್ಷೆಗೊಳಗಾದ ಅಪರಾಧಿಗಳನ್ನು ಹಿಂಡಲಗಾದಲ್ಲಿ ಇರಿಸಲಾಗುತ್ತದೆ. ಮರಣದಂಡನೆ ಶಿಕ್ಷೆಗೆ ಗುರಿಯಾಗದ ಕಾರಣ ರೆಡ್ಡಿಯನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಪೊಲೀಸ್ ಪೇದೆಯಾಗಿದ್ದ ರೆಡ್ಡಿ 18 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಒಂಬತ್ತು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಫೆಬ್ರವರಿ 28, 1998 ರಂದು ಪೀಣ್ಯದ 37 ವರ್ಷ ವಯಸ್ಸಿನ ವಿಧವೆ ಜಯಶ್ರೀ ಮರಡಿ ಸುಬ್ಬಯ್ಯನ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ್ದಕ್ಕಾಗಿ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಆತನಿಗೆ ಮರಣದಂಡನೆ ವಿಧಿಸಿತು.

ಸಂತ್ರಸ್ತೆಯ ಏಳು ವರ್ಷದ ಮಗ ಅಪರಾಧಕ್ಕೆ ಏಕೈಕ ಸಾಕ್ಷಿಯಾಗಿದ್ದನು. ರೆಡ್ಡಿ ಯಾವುದೋ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿದ ನಂತರ ಒಂಟಿಯಾಗಿರುವ ಮಹಿಳೆಯರನ್ನು ಗುರಿಯಾಗಿಸಿಕೊಂಡು ಚಾಕು ತೋರಿಸಿ ಬೆದರಿಸಿ ಬಟ್ಟೆ ತೆಗೆಯಲು,  ಹೇಳಿದ್ದ. ನಂತರ ಕಟ್ಟಿಹಾಕಿ, ಉಸಿರುಗಟ್ಟಿಸಿ ಅತ್ಯಾಚಾರ ಎಸಗುತ್ತಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT