ಸಂಗ್ರಹ ಚಿತ್ರ 
ರಾಜ್ಯ

ಪಿಎಸ್ಐ ನೇಮಕಾತಿ ಹಗರಣ: ಅಕ್ರಮ ಎಸಗಿದ್ದ 52 ಅಭ್ಯರ್ಥಿಗಳು ಶಾಶ್ವತ ಡಿಬಾರ್!

ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಆದೇಶಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಆದೇಶಿಸಲಾಗಿದೆ.

ಈ ಕುರಿತು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಡಿಜಿಪಿ ಕಮಲ್ ಪಂತ್ ಬುಧವಾರ ಆದೇಶ ಹೊರಡಿಸಿದ್ದಾರೆ,

2021 ಅಕ್ಟೋಬರ್ 3 ರಂದು 545 ಪಿಎಸ್‌ಐ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ದೂರು ಕೇಳಿ ಬಂದಿದ್ದರಿಂದ ಸಿಐಡಿ ಇದರ ತನಿಖೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಮೊಕದ್ದಮೆ ದಾಖಲಿಸಲಾಗಿತ್ತು.

ಬೆಂಗಳೂರು ನಗರ, ಕಲಬುರಗಿ, ಹುಬ್ಬಳ್ಳಿ- ಧಾರವಾಡ ನಗರ, ತುಮಕೂರು ನಗರ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದವು.

ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಪತ್ರಿಕೆ-1ರಲ್ಲಿ ಕೆಲ ಅಭ್ಯರ್ಥಿಗಳು ಬ್ಲೂಟೂತ್, ಇತರೆ ಎಲೆಕ್ಟ್ರಾನಿಕ್ ಸಾಧನ ಬಳಸಿ ಅಕ್ರಮ ಎಸಗಿದ್ದು ಬೆಳಕಿಗೆ ಬಂದಿತ್ತು. ಕೆಲವು ಅಭ್ಯರ್ಥಿಗಳು ಓಎಂಆರ್ ಶೀಟ್‌ಗಳನ್ನೇ ತಿದ್ದುಪಡಿ ಮಾಡಿಸಿಕೊಂಡಿರುವುದು ದೃಢವಾಗಿದ್ದರಿಂದ ಅಂಥಹ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳು ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಡಿಬಾರ್ ಮಾಡುವ ಮುನ್ನ ಈ 52 ಜನರ ಬಳಿ ಸ್ಪಷ್ಟನೆ ಕೇಳಲಾಗಿತ್ತು. ಸ್ಪಷ್ಟನೆ ಪಡೆದ ನಂತರವೇ ಈ ಎಲ್ಲಾ 52 ಅಭ್ಯರ್ಥಿಗಳನ್ನು ನೇಮಕಾತಿ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ ಎಂದು ಡಿಜಿಪಿ (ನೇಮಕಾತಿ) ಅವರ ಆದೇಶ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT