ಕುಕ್ಕೆ ಸುಬ್ರಮಣ್ಯ ದೇವಾಲಯ 
ರಾಜ್ಯ

65 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಕರ್ನಾಟಕದ ಮುಜರಾಯಿ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆ

ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು: ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ್ದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾದಿವಂತರ ಒಕ್ಕೂಟದ ಸದಸ್ಯರು ಈ ಬಗ್ಗೆ ಮನವಿ ಸಲ್ಲಿಸಿದ್ದರು.

ದೇವಾಲಯಗಳಲ್ಲಿ ದರ್ಶನಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಿದೆ, ಇದರಿಂದ ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟವಾಗುತ್ತಿದೆ. ಇವರು ತಮ್ಮ ವಯಸ್ಸಿನ ದಾಖಲೆ ಅಥವಾ ಆಧಾರ್‌ ಕಾರ್ಡ್‌ ಅನ್ನು ತೋರಿಸಿದರೆ, ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸ್ಥಳಾವಕಾಶ ಇದ್ದರೆ ಪ್ರತ್ಯೇಕ ಸ್ಥಳ ಕಾಯ್ದಿರಿಸುವಂತೆಯೂ ಸೂಚಿಸಲಾಗಿದೆ.

ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗಾಗಿ ಸಹಾಯ ಕೇಂದ್ರವನ್ನು ಸ್ಥಾಪಿಸಿ, ಜವಾಬ್ದಾರಿಯುತ ಸಿಬ್ಬಂದಿಯನ್ನು ನಿಯೋಜಿಸಿ ದೇವರ ದರ್ಶನದ ವ್ಯವಸ್ಥೆ ಮಾಡಬೇಕು ಎಂದೂ ಸುತ್ತೋಲೆಯಲ್ಲಿ ವಿವರಿಸಲಾಗಿದೆ.

ಹಿರಿಯ ನಾಗರಿಕರು 202 ಪ್ರವರ್ಗ 'ಎ' ಮತ್ತು 156 ವರ್ಗ 'ಬಿ' ಗೆ ಸೇರಿದ ಮುಜರಾಯಿ ಇಲಾಖೆಯ ಒಟ್ಟು 358 ದೇವಸ್ಥಾನಗಳಲ್ಲಿ ಸರದಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ದರ್ಶನ ಪಡೆಯಬಹುದಾಗಿದೆ.

ಇದರಲ್ಲಿ ಬೆಂಗಳೂರಿನ ದೊಡ್ಡ ಗಣಪತಿ, ಬನಶಂಕರಿ ಮತ್ತು ಧರ್ಮರಾಯ ಸ್ವಾಮಿ ದೇವಸ್ಥಾನಗಳು, ದಕ್ಷಿಣ ಕನ್ನಡದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಬೆಳಗಾವಿಯ ರೇಣುಕಾ ಯಲ್ಲಮ್ಮ ದೇವಸ್ಥಾನಗಳು  ಸೇರಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT