ವೃದ್ಧೆ ಗಿರಿಜಮ್ಮರ ಮನೆ 
ರಾಜ್ಯ

ಪುಟ್ಟ ಮನೆಯಲ್ಲಿ ಎರಡು ಬಲ್ಬ್ ಹೊಂದಿರುವ ವೃದ್ಧೆಗೆ ಲಕ್ಷ ರೂ. ವಿದ್ಯುತ್ ಬಿಲ್: ಪ್ರಮಾದ ಸರಿಪಡಿಸಿದ ಜೆಸ್ಕಾಂ ಎಂಜಿನಿಯರ್

ಸಣ್ಣ ತಗಡಿನ ಮನೆಯಲ್ಲಿ ವಾಸ, ಮನೆಯಲ್ಲಿ ಎರಡೇ ಬಲ್ಬ್, ಭಾಗ್ಯ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡು ದಿನದ ಊಟಕ್ಕೆ ಕಷ್ಟಪಡುತ್ತಾ ಬದುಕು ಸಾಗಿಸುತ್ತಿರುವ 80 ವರ್ಷದ ಅಜ್ಜಿಗೆ ಬಂದಿರುವ ವಿದ್ಯುತ್ ಬಿಲ್ಲು ಬರೋಬ್ಬರಿ 1 ಲಕ್ಷ ರೂಪಾಯಿ.

ಕೊಪ್ಪಳ: ಸಣ್ಣ ತಗಡಿನ ಮನೆಯಲ್ಲಿ ವಾಸ, ಮನೆಯಲ್ಲಿ ಎರಡೇ ಬಲ್ಬ್, ಭಾಗ್ಯ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡು ದಿನದ ಊಟಕ್ಕೆ ಕಷ್ಟಪಡುತ್ತಾ ಬದುಕು ಸಾಗಿಸುತ್ತಿರುವ 80 ವರ್ಷದ ಅಜ್ಜಿಗೆ ಬಂದಿರುವ ವಿದ್ಯುತ್ ಬಿಲ್ಲು ಬರೋಬ್ಬರಿ 1 ಲಕ್ಷ ರೂಪಾಯಿ.

ಕೊಪ್ಪಳದ ಭಾಗ್ಯನಗರದಲ್ಲಿ ಸಣ್ಣ ತಗಡಿನ ಶೆಡ್​ನಲ್ಲಿ ವಾಸವಾಗಿರುವ 90 ವಯಸ್ಸಿನ ಗಿರಿಜಮ್ಮ ಮನೆಯಲ್ಲಿ ಎರಡು ಬಲ್ಬ್ ಸಂಪರ್ಕ ಹಾಕಿಸಿಕೊಂಡಿದ್ದಾರಷ್ಟೆ. ಈ ಅಜ್ಜಿ ಭಾಗ್ಯ ಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದರು. ಹೀಗಾಗಿ ಜೆಸ್ಕಾಂ, 70 ರಿಂದ 80 ರೂಪಾಯಿ ಬೀಲ್ ನೀಡುತ್ತಿತ್ತು. ಆದರೆ, ಆರು ತಿಂಗಳ ಹಿಂದೆ ವೃದ್ದೆಯ ಮನೆಗೆ ಜೆಸ್ಕಾಂ ಸಿಬ್ಬಂದಿ ಮೀಟರ್ ಅಳವಡಿಸಿದ್ದು, ಇದೀಗ 6 ತಿಂಗಳಲ್ಲಿ ಅಜ್ಜಿ ಮನೆಗೆ ಬರೋಬ್ಬರಿ 1,03,315 ರೂಪಾಯಿ ಬಿಲ್ ಬಂದಿದ್ದು, ಅಜ್ಜಿ ಶಾಕ್ ಆಗಿದ್ದಾರೆ.

ಈ ಅಜ್ಜಿ ಈಗ 1 ಲಕ್ಷ ರೂ. ವಿದ್ಯುತ್ ಬಿಲ್ ಹೇಗೆ ಕಟ್ಟುವುದು ಎಂದು ಕಣ್ಣೀರಿಡುತ್ತಿದ್ದಾರೆ. ಇನ್ನು ಒಂದು ತಗಡಿನ ಶೆಡ್ ಮನೆಯಲ್ಲಿ ಕೇವಲ ಎರಡು ಬಲ್ಬ್​ಗೆ ಲಕ್ಷಗಟ್ಟಲೇ ವಿದ್ಯುತ್​ ಬಿಲ್​ ಬರುತ್ತಾ ಎನ್ನುವುದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. 

ಗೃಹ ಜ್ಯೋತಿ ಯೋಜನೆ(Gruha jyothi scheme) ಅಡಿಯಲ್ಲಿ  200 ಯುನಿಟ್​ ವಿದ್ಯುತ್ ಫ್ರೀ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದ ಹಲವೆಡೆ ವಿದ್ಯುತ್​ ಬಿಲ್ ಲಕ್ಷ ಲಕ್ಷ ಬರುತ್ತಿರುವುದು ಇತ್ತೀಚೆಗೆ ವರದಿಯಾಗಿತ್ತು. ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರ ಮನೆಗೆ 7.71 ಸಾವಿರ ರೂಪಾಯಿ ವಿದ್ಯುತ್ ಬಿಲ್​ ನೀಡಲಾಗಿತ್ತು. ಬೆಳಗಾವಿಯ ವಿಟಿಯು ವಿಶ್ವವಿದ್ಯಾಯಲಕ್ಕೆ ಹೆಸ್ಕಾಂ ಬರೋಬ್ಬರಿ 18 ಲಕ್ಷ ರೂಪಾಯಿ ವಿದ್ಯುತ್ ಬಿಲ್ ನೀಡಿದ್ದು ಸುದ್ದಿಯಾಗಿತ್ತು.

ಜೆಸ್ಕಾಂ ಎಂಜಿನಿಯರ್ ಸ್ಪಷ್ಟನೆ: ವೃದ್ಧೆ ಗಿರಿಜಮ್ಮ ನಿವಾಸಕ್ಕೆ ಇಂದು ಜೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜೇಶ್​​ ಭೇಟಿ ನೀಡಿದ್ದಾರೆ. 2021ರಿಂದ ಮೀಟರ್ ರೀಡಿಂಗ್ ತೊಂದರೆಯಿಂದ ಬಿಲ್ ಬಂದಿದೆ. ಅಜ್ಜಿ ಗಿರಿಜಮ್ಮ ವಿದ್ಯುತ್​​ ಬಿಲ್ ಪಾವತಿ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಸಿಬ್ಬಂದಿ ಹಾಗೂ ಬಿಲ್ ಕಲೆಕ್ಟರ್ ತಪ್ಪಿನಿಂದಾಗಿ ಹೀಗಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತದೆ. ಇಂತಹ ಯಾವುದೇ ಪ್ರಕರಣಗಳಿದ್ದರೂ ನಮ್ಮ ಗಮನಕ್ಕೆ ತನ್ನಿ ಎಂದು ಕೊಪ್ಪಳ ಜೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜೇಶ್​​ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ