ಸಾಂದರ್ಭಿಕ ಚಿತ್ರ 
ರಾಜ್ಯ

ಕಾಡು ಹಾದಿಯಲ್ಲಿ ನಡೆದು ಹೋಗುತ್ತಿದ್ದಾಗ ಕರಡಿ ದಾಳಿ; ಕಣ್ಣುಗುಡ್ಡೆ ಕಿತ್ತುಬಂದರೂ 2 ಕಿಮೀ ನಡೆದು ಬಂದ ವ್ಯಕ್ತಿ!

ಕರಡಿ ದಾಳಿಯಿಂದ 70 ವರ್ಷದ ವ್ಯಕ್ತಿಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ. ಮಹಾರಾಷ್ಟ್ರದ ವಿಟ್ಟು ಶೆಳಾಕೆ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉತ್ತರ ಕನ್ನಡ: ಕರಡಿ ದಾಳಿಯಿಂದ 70 ವರ್ಷದ ವ್ಯಕ್ತಿಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ.

ಮಹಾರಾಷ್ಟ್ರದ ವಿಟ್ಟು ಶೆಳಾಕೆ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಳಾಕೆ ಅವರು ರಾಮನಗರದಿಂದ ತಿಂಬೋಲಿ ಗ್ರಾಮಕ್ಕೆ ಕಾಡಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ವ್ಯಕ್ತಿಯ ಮೇಲೆ ದಾಳಿ ಮಾಡಿದ ಕರಡಿ, ಅವರ ಒಂದು ಕಣ್ಣನ್ನು ಕಿತ್ತುಹಾಕಿದೆ ಮತ್ತು ಇನ್ನೊಂದು ಕಣ್ಣಿಗೂ ಗಾಯ ಉಂಟುಮಾಡಿದೆ. ಆದರೆ, ವೃದ್ಧ ದೃತಿಗೆಡದೆ ಧೈರ್ಯದಿಂದ ಕರಡಿ ವಿರುದ್ಧ ಹೋರಾಡಿ, ಕಿರುಚುತ್ತಾ, ಕೂಗಾಡಿದ್ದಾರೆ. ಇದರಿಂದ ಕರಡಿ ಗಾಬರಿಯಿಂದ ಅಲ್ಲಿಂದ ಕಾಲ್ಕಿತ್ತಿದೆ. 

ಕರಡಿ ಅವರನ್ನು ಬಿಟ್ಟು ಕಾಡಿನಲ್ಲಿ ಕಣ್ಮರೆಯಾದ ನಂತರ, ತೀವ್ರ ರಕ್ತಸ್ರಾವವಾಗುತ್ತಿದ್ದರೂ ಕೂಡ ವೃದ್ಧ ಸುಮಾರು ಎರಡು ಕಿ.ಮೀ. ನಡೆದು ಜೀವ ಉಳಿಸಿಕೊಂಡಿದ್ದಾರೆ. ಶಳಾಕೆ ಅವರಿಗೆ ರಾಮನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಆಸ್ಪತ್ರೆಗೆ ರವಾನಿಸಲಾಗಿದೆ. 

ರಾಮನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಮಧ್ಯೆ, ಕರಡಿ ದಾಳಿಯು ಆ ಪ್ರದೇಶದ ಜನರಲ್ಲಿ ಭಯ ಮತ್ತು ಆತಂಕವನ್ನು ಉಂಟುಮಾಡಿದೆ. ಕರಡಿ ದಾಳಿಯಿಂದ ಜನರನ್ನು ರಕ್ಷಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅರಣ್ಯಾಧಿಕಾರಿಗಳು ಕೂಡ ಈ ಪ್ರದೇಶದ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ