ಬಿಸ್ನಹಳ್ಳಿ ಗ್ರಾಮದಲ್ಲಿ ಪೊಲೀಸರ ಪರಿಶೀಲನೆ ಚಿತ್ರ 
ರಾಜ್ಯ

ಸ್ತ್ರೀ ಶಕ್ತಿ ಸಂಘದಿಂದ ಬ್ಯಾಂಕ್ ಸಿಬ್ಬಂದಿ ಬೈಕಿಗೆ ಬೆಂಕಿ: ಇದು ಸುಳ್ಳು ಸುದ್ದಿ, ಪೊಲೀಸರ ಸ್ಪಷ್ಟನೆ

ಮುಳಬಾಗಿಲು ತಾಲ್ಲೂಕ್ ಬಿಸ್ನಹಳ್ಳಿ ಗ್ರಾಮದಲ್ಲಿ  ಸಾಲ ವಸೂಲಿ ಮಾಡಲು ಹೋದ ಡಿಸಿಸಿ ಬ್ಯಾಂಕ್ ಸಿಬ್ಬಂದಿಯ ಬೈಕಿಗೆ ಸ್ತ್ರಿ ಶಕ್ತಿ ಸಂಘದವರು ಬೆಂಕಿ ಹಚ್ಚಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಇಂತಹ ಯಾವುದೇ ಘಟನೆ ನಡೆದಿಲ್ಲ, ಇದು ಸುಳ್ಳು ಸುದ್ದಿ ಎಂದು ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ. 

ಕೋಲಾರ: ಮುಳಬಾಗಿಲು ತಾಲ್ಲೂಕ್ ಬಿಸ್ನಹಳ್ಳಿ ಗ್ರಾಮದಲ್ಲಿ  ಸಾಲ ವಸೂಲಿ ಮಾಡಲು ಹೋದ ಡಿಸಿಸಿ ಬ್ಯಾಂಕ್ ಸಿಬ್ಬಂದಿಯ ಬೈಕಿಗೆ ಸ್ತ್ರಿ ಶಕ್ತಿ ಸಂಘದವರು ಬೆಂಕಿ ಹಚ್ಚಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಇಂತಹ ಯಾವುದೇ ಘಟನೆ ನಡೆದಿಲ್ಲ, ಇದು ಸುಳ್ಳು ಸುದ್ದಿ ಎಂದು ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ. 

ಸಾಲ ವಸೂಲಾತಿಗಾಗಿ ಬ್ಯಾಂಕ್ ಸಿಬ್ಬಂದಿ ಗ್ರಾಮಕ್ಕೆ ತೆರಳಿದಾಗ ಸರ್ಕಾರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿರುವುದರಿಂದ ಸಾಲ ಮರು ಪಾವತಿ ಮಾಡುವುದಿಲ್ಲ ಎಂದು ಸ್ತ್ರಿಶಕ್ತಿ ಸಂಘದ ಮಹಿಳೆಯರು ಹೇಳಿದ ನಂತರ ಬ್ಯಾಂಕ್ ಸಿಬ್ಬಂದಿ ಅಲ್ಲಿಂದ ಹಿಂತಿರುಗಿ ಬಂದಿದ್ದಾರೆ. ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ, ಯಾವುದೇ ವಾಹನಕ್ಕೆ ಬೆಂಕಿ ಸಹ ಇಟ್ಟಿಲ್ಲ ಎಂದು ಅವರು ತಿಳಿಸಿದ್ದಾರೆ. 

ಅದೇ ಗ್ರಾಮದ ಮಂಜು ಎಂಬ ವ್ಯಕ್ತಿ ತನ್ನ ಬೈಕಿಗೆ ತಾನೇ ಬೆಂಕಿ ಹತ್ತಿಕೊಂಡು ಇದನ್ನು ವಿಡಿಯೋ ಮಾಡಿ ಸಾಲ ವಸೂಲಾತಿಗೆ ತೆರಳಿದ ಸಿಬ್ಬಂದಿ ಬೈಕ್ ಗೆ ಬೆಂಕಿ ಹಚ್ಚಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟು ತಪ್ಪು ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ, ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿ ಸುಳ್ಳಾಗಿದ್ದು, ಈ ಬಗ್ಗೆ ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT