ರಾಜ್ಯ

ಆಗಸ್ಟ್ 17 ಅಥವಾ 18ರಂದು ‘ಗೃಹಲಕ್ಷ್ಮೀ’ ಯೋಜನೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

Lingaraj Badiger

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಯೋಜನೆ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಶುಕ್ರವಾರ ಹೇಳಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ, ಗ್ರಾಮೀಣಾಭಿವೃದ್ಧಿ ಸೇರಿ ಮೂರು ಇಲಾಖೆ ಸಚಿವರು, ಜೊತೆಗೆ ಅಧಿಕಾರಿಗಳು ಸುದೀರ್ಘವಾಗಿ ಸಭೆ ನಡೆಸಿದ್ದೇವೆ ಎಂದರು.

ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ ಬುಧವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಆಗಸ್ಟ್ 17 ಅಥವಾ 18ರಂದು ಯೋಜನೆ ಜಾರಿ ಮಾಡುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ಮನೆಯ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮೀ ಯೋಜನೆ, ಅರ್ಜಿ ಸಲ್ಲಿಕೆಗೆ ಸರ್ವರ್ ಸಮಸ್ಯೆ ಆಗುತ್ತಿರುವ ಹಿನ್ನಲೆಯಲ್ಲಿ ವಿಳಂಬ ಆಗುತ್ತಿದೆ. ಈ ನಿಟ್ಟಿನಲ್ಲಿ ಸರಳವಾಗಿ ಜನರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಲು ಇಲಾಖೆ ಪ್ರಯತ್ನ ನಡೆಸುತ್ತಿದೆ.

SCROLL FOR NEXT