ಸಿಎಂ ಸಿದ್ದರಾಮಯ್ಯ 
ರಾಜ್ಯ

ಪುಣೆಯಲ್ಲಿ ಭಾನುವಾರ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ರಿಂದ ಸಿಎಂ ಸಿದ್ದರಾಮಯ್ಯಗೆ ಸನ್ಮಾನ

ಎನ್‌ಸಿಪಿ ಮುಖ್ಯಸ್ಥ ಮತ್ತು ರಾಜ್ಯಸಭಾ ಸದಸ್ಯ ಶರದ್ ಪವಾರ್ ನೇತೃತ್ವದಲ್ಲಿ ಧಂಗರ್ ಸಮುದಾಯವು ಭಾನುವಾರ ಪುಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಿದೆ ಎಂದು ಸಿಎಂ ಕಚೇರಿ ಅಧಿಕೃತ ಪ್ರಕಟಣೆ ತಿಳಿಸಿದೆ. ದೊರೆ ಅಹಲ್ಯಾದೇವಿ ಜನ್ಮದಿನದ ಸಂದರ್ಭದಲ್ಲಿ ಈ ಸನ್ಮಾನ ನಡೆಯಲಿದೆ.

ಬೆಂಗಳೂರು: ಎನ್‌ಸಿಪಿ ಮುಖ್ಯಸ್ಥ ಮತ್ತು ರಾಜ್ಯಸಭಾ ಸದಸ್ಯ ಶರದ್ ಪವಾರ್ ನೇತೃತ್ವದಲ್ಲಿ ಧಂಗರ್ ಸಮುದಾಯವು ಭಾನುವಾರ ಪುಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಿದೆ ಎಂದು ಸಿಎಂ ಕಚೇರಿ ಅಧಿಕೃತ ಪ್ರಕಟಣೆ ತಿಳಿಸಿದೆ. ದೊರೆ ಅಹಲ್ಯಾದೇವಿ ಜನ್ಮದಿನದ ಸಂದರ್ಭದಲ್ಲಿ ಈ ಸನ್ಮಾನ ನಡೆಯಲಿದೆ.

ಪವಾರ್ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಹ್ವಾನ ನೀಡಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇತ್ತೀಚಿನ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಜಾತ್ಯತೀತ ಶಕ್ತಿಗಳ ಬಲವನ್ನು ಪ್ರದರ್ಶಿಸಿವೆ ಮತ್ತು ರಾಷ್ಟ್ರದ ರಾಜಕೀಯ ಚಲನವಲನದಲ್ಲಿ ಬದಲಾವಣೆಗೆ ದಾರಿ ಮಾಡಿಕೊಟ್ಟಿವೆ ಎಂದು ಅವರು ಹೇಳಿದ್ದಾರೆ. 

"ಚುನಾವಣೆ ಪ್ರತಿಧ್ವನಿಯು ಮಹಾರಾಷ್ಟ್ರಕ್ಕೂ ವ್ಯಾಪಿಸಿದ್ದು, ಅಲ್ಲಿನ ಜನರು ತಮ್ಮನ್ನು ಸನ್ಮಾನಿಸುವ ಉತ್ಸಾಹದಲ್ಲಿದ್ದಾರೆ.  ಪುಣೆ ಜಿಲ್ಲೆಯ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು  ಅಹಲ್ಯಾದೇವಿ ವಿಕಾಸ ಪ್ರತಿಷ್ಠಾನದ ಅಧ್ಯಕ್ಷ ವಿಶ್ವಾಸ್ ಡಿಯೋಕಾಟೆ ನೇತೃತ್ವದ ನಿಯೋಗ ಅಹಲ್ಯಾದೇವಿ ಜನ್ಮ ದಿನಾಚರಣೆಯ ಆಹ್ವಾನ ನೀಡಲಿದೆ ಎಂದು ಅವರು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT