ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪಾರ್ಟ್ ಮೆಂಟ್ ನ 10ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣು

ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶರ್ಮಾ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇಲ್ಲಿ ತನ್ನ ಅತ್ತೆಯೊಂದಿಗೆ ವಾಸವಿದ್ದ ಶರ್ಮಾ ಗುರುವಾರ ರಾತ್ರಿ 10ನೇ ಮಹಡಿಯಿಂದ ಜಿಗಿದಿದ್ದಾಳೆ.

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಅಮೃತಾ ಶರ್ಮಾ (27) ಮೃತ ಯುವತಿ. ಕುಟುಂಬದ ಜೊತೆ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಯುವತಿ, ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಅಪಾರ್ಟ್ ಮೆಂಟ್ ನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶರ್ಮಾ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇಲ್ಲಿ ತನ್ನ ಅತ್ತೆಯೊಂದಿಗೆ ವಾಸವಿದ್ದ ಶರ್ಮಾ ಗುರುವಾರ ರಾತ್ರಿ 10ನೇ ಮಹಡಿಯಿಂದ ಜಿಗಿದಿದ್ದಾಳೆ.

ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಆಕೆ  ಸಾವನ್ನಪ್ಪಿದ್ದಾಳೆ ಎಂದು  ವೈದ್ಯರು ತಿಳಿಸಿದ್ದಾರೆ. ಅಮೃತಾ ಶರ್ಮಾ ಇತ್ತೀಚೆಗಷ್ಟೇ ತನ್ನ ತಂದೆಯನ್ನು ಕಳೆದುಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಲಕ್ನೋದಲ್ಲಿರುವ ಆಕೆಯ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಅವರು ಬೆಂಗಳೂರಿಗೆ ಬರುತ್ತಿದ್ದಾರೆ. ಅವರ ಕುಟುಂಬ ಸದಸ್ಯರ ಹೇಳಿಕೆಯನ್ನು ದಾಖಲಿಸಿದ ನಂತರ ಪ್ರಕರಣದಲ್ಲಿ ಹೆಚ್ಚಿನ ಸ್ಪಷ್ಟತೆ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಮಧ್ಯಪ್ರದೇಶ: ಕಿರಿಯ ವಿದ್ಯಾರ್ಥಿಗೆ ಬೆಲ್ಟ್‌ನಿಂದ ಹೊಡೆತ; ಕೈ ಸುಟ್ಟು ದೌರ್ಜನ್ಯ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ