ಪ್ರಿಯಾಂಕ್ ಖರ್ಗೆ, ನಳಿನ್ ಕುಮಾರ್ ಕಟೀಲ್ 
ರಾಜ್ಯ

ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆ ಕ್ಲಾಸ್: ನಳಿನ್ ಕುಮಾರ್ ಕಟೀಲ್ ಕಿಡಿ

ಇತ್ತೀಚಿಗೆ ಕಲಬುರಗಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ, ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿ ಎಂದು ಎಚ್ಚರಿಕೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

ಬೆಂಗಳೂರು: ಇತ್ತೀಚಿಗೆ ಕಲಬುರಗಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ, ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿ ಎಂದು ಎಚ್ಚರಿಕೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್,  ಗೃಹ ಸಚಿವರಾದ  ಡಾ.ಜಿ.ಪರಮೇಶ್ವರ್ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ ತಿಳಿಯುತ್ತಿಲ್ಲ ಅಥವಾ ತಮ್ಮ ಖಾತೆಯನ್ನು ಪ್ರಿಯಾಂಕ್ ಖರ್ಗೆ ಅವರಿಗೆ ಲೀಸ್ ಕೊಟ್ಟಿದ್ದಾರೋ? ಪೊಲೀಸ್ ಅಧಿಕಾರಿಗಳಿಗೆ ಮರಿ ಖರ್ಗೆ ಕ್ಲಾಸ್ ತಗೊತ್ತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಅವರೇ ಪೊಲೀಸ್ ಅಧಿಕಾರಿಗಳನ್ನು ಕಂಟ್ರೋಲ್ ಮಾಡುವ ಕೆಲಸ ಬಿಟ್ಟು, ದನಕಳ್ಳರು, ಅಕ್ರಮ ಕಸಾಯಿಖಾನೆಗಳು, ಲವ್ ಜಿಹಾದ್ ಮಾಡುವವರು, ಅಶಾಂತಿ ದೂತರ ಮೇಲೆ ಕ್ರಮ ಕೈಗೊಳ್ಳಿ ಮತ್ತು ಹಿಂದೂಪರ ಕಾರ್ಯಕರ್ತರನ್ನು ಟಾರ್ಗೆಟ್ ಮಾಡೋದು ಬೇಡ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT