ಸಂಗ್ರಹ ಚಿತ್ರ 
ರಾಜ್ಯ

ಬೆಳಗಾವಿ: ಮರಳು ತುಂಬಿದ ಲಾರಿ ಹರಿದು ಮಹಿಳೆ ಸಾವು

ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ದೇವಗಿರಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಬೆಳಗಾವಿ: ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ದೇವಗಿರಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಮೃತ ಮಹಿಳೆಯನ್ನು ಬೆಳಗಾವಿಯ ಕುರಿಹಾಳ್ ಗ್ರಾಮದ ನಿವಾಸಿ ಇಮಾಂಬಿ ಇಮಾಮ್ಸಾಬ್ ಜಾಸಿ (56) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಗಾಯಾಳುವನ್ನು ಆಕೆಯ ಮಗ ಅಲ್ಲಾವುದ್ದೀನ್ ಜಾಸಿ (46) ಎಂದು ಗುರ್ತಿಸಲಾಗಿದೆ.

ಅಲ್ಲಾವುದ್ದೀನ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತ ಇಮಾಂಬಿ ಅವರು ಮಗನೊಂದಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಕುರಿಹಾಳ್ ಗ್ರಾಮದಿಂದ ಕಾಕತಿಗೆ ಪ್ರಯಾಣಿಸುತ್ತಿದ್ದರು.

ಈ ವೇಳೆ ದೇವಗಿರಿ ಬಸ್ ನಿಲ್ದಾಣದ ಬಳಿ ಮರಳು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಮಹಿಳೆ ಮೇಲೆ ಹರಿದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ಸಹಾಯ ಮಾಡುವ ಬದಲು ಲಾರಿ ಚಾಲಕ ವಾಹನವನ್ನು ನಿಲ್ಲಿಸದೆ, ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ಈ ಸಂಬಂಧ ಮಾಹಿತಿ ಪಡೆದ ಕಾಕತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Tsunami: ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಅಪಾಯಕಾರಿ ಸುನಾಮಿಯ ಎಚ್ಚರಿಕೆ!

Bus strike-ಬೇಡಿಕೆಗೆ ಕ್ಯಾರೇ ಎನ್ನದ ಸರ್ಕಾರ: ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

No Nobel for Trump? 'ರಾಜತಾಂತ್ರಿಕ ಬಿಕ್ಕಟ್ಟಿ'ನ ಭೀತಿಯಲ್ಲಿ ನಾರ್ವೆ!

ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟ್: ಗರಿಗೆದರಿದ ಸಂಪುಟ ಪುನಾರಚನೆ, ಡಿಸಿಎಂ ಡಿಕೆಶಿ ಏನೆಂದರು?

ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

SCROLL FOR NEXT