ಬೆಂಗಳೂರಿನಲ್ಲಿ ಗುರುವಾರ ನಡೆದ ಸಭೆಯಲ್ಲಿ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮತ್ತು ನಗರ ಪೊಲೀಸ್ ಆಯುಕ್ತ ಬಿ ದಯಾನಂದ. 
ರಾಜ್ಯ

ಅಪರಾಧ ನಡೆದ ಸ್ಥಳಗಳಿಗೆ ಭೇಟಿ ಕೊಟ್ಟು, ತನಿಖೆಗೆ ಮಾರ್ಗದರ್ಶನ ನೀಡಿ: ಅಧಿಕಾರಿಗಳಿಗೆ ಡಿಜಿ ಅಲೋಕ್ ಮೋಹನ್ ಸೂಚನೆ

ಅಪರಾಧ ನಡೆದ ಸ್ಥಳಗಳಿಗೆ ಭೇಟಿ ನೀಡಿ, ತನಿಖೆಗೆ ಮಾರ್ಗದರ್ಶನಗಳ ನೀಡಿ ಎಂದು ಎಸ್'ಪಿ, ಡಿಸಿಪಿಗಳಿಗೆ ಪೊಲೀಸ್ ಮಹಾನಿರೀಕ್ಷಕ ಅಲೋಕ್ ಮೋಹನ್ ಅವರು ಗುರುವಾರ ಸೂಚನೆ ನೀಡಿದ್ದಾರೆ.

ಬೆಂಗಳೂರು: ಅಪರಾಧ ನಡೆದ ಸ್ಥಳಗಳಿಗೆ ಭೇಟಿ ನೀಡಿ, ತನಿಖೆಗೆ ಮಾರ್ಗದರ್ಶನಗಳ ನೀಡಿ ಎಂದು ಎಸ್'ಪಿ, ಡಿಸಿಪಿಗಳಿಗೆ ಪೊಲೀಸ್ ಮಹಾನಿರೀಕ್ಷಕ ಅಲೋಕ್ ಮೋಹನ್ ಅವರು ಗುರುವಾರ ಸೂಚನೆ ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಡಿಜಿಪಿ ಅಲೋಕ್ ಕುಮಾರ್ ಅವರು, ಸಭೆಯಲ್ಲಿ ಪರಿಣಾಮಕಾರಿ ತನಿಖೆಯ ಅಗತ್ಯವನ್ನು ಒತ್ತಿ ಹೇಳಿದರು. ಅಪರಾಧಗಳನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದರು.

ಹಿರಿಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪ್ರಕರಣಗಳ ಮೇಲೆ ನಿಗಾ ಇಡಬೇಕು. ಸೂಕ್ಷ್ಮ ಪ್ರಕರಣಗಳ ತನಿಖೆಯನ್ನು ಮೇಲ್ವಿಚಾರಣೆ ಮಾಡಬೇಕು. ಗಂಭೀರ ಅಪರಾಧಗಳ ಕೃತ್ಯಗಳಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಲು ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

ಗಸ್ತು ತಿರುವುದನ್ನು ಪರಿಣಾಮಕಾರಿಯಾಗಿ ಮಾಡಬೇಕು. ಅಪರಾಧ ಕೃತ್ಯಗಳ ತಡೆಯಲು ಮತ್ತಷ್ಟು ಸಿಬ್ಬಂದಿಗಳು ಗಸ್ತು ತಿರುಗಬೇಕು ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳ ಮೇಲೆ ವಿಶೇಷ ನಿಗಾವಹಿಸಬೇಕು. ಇದಕ್ಕಾಗಿ ಪ್ರತ್ಯೇಕ ತಂಡ ರಚನೆ ಮಾಡಲಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು

ರಾಹುಲ್- ಸೋನಿಯಾ ಗಾಂಧಿ ಏನೇ ಹೇಳಿದ್ರು ಪ್ರಸಾದವೆಂದು ಸ್ವೀಕಾರ: ಕೇಂದ್ರ ಜನಸಾಮಾನ್ಯರ ನೋವು ಅರಿಯಬೇಕು; ಡಿ.ಕೆ. ಶಿವಕುಮಾರ್

ನರ್ಮದಾ ನದಿಯಲ್ಲಿ ಪ್ರವಾಸಿ ಬೋಟ್ ಜಲಸಮಾಧಿ: ಸಾವಿನ ಸಂಖ್ಯೆ 9ಕ್ಕೆ ಏರಿಕೆ; ಎದೆಗೆ ಅಪ್ಪಿಕೊಂಡ ಸ್ಥಿತಿಯಲ್ಲಿ ತಾಯಿ-ಮಗು ಶವಪತ್ತೆ

ನಾಯಕತ್ವ ಹಗ್ಗಜಗ್ಗಾಟ ನಡುವೆ ಗುಪ್ತಚರ ಮುಖ್ಯಸ್ಥರ ಬದಲಾವಣೆ: ಅಧಿಕಾರ ಇನ್ನೂ ನನ್ನ ಕೈಯಲ್ಲೇ ಇದೆ, ಕಠಿಣ ಸಂದೇಶ ರವಾನಿಸಿದ ಸಿದ್ದರಾಮಯ್ಯ..?

ಗಾಯದ ಮೇಲೆ ಬರೆ: ವಾಣಿಜ್ಯ LPG ಸಿಲಿಂಡರ್ ದರ ರೂ.993 ಏರಿಕೆ, ಹೊಸ ದರ ಇಂದಿನಿಂದ ಜಾರಿ..!

SCROLL FOR NEXT