ಮಗುವಿನ ಮೇಲೆ ಮತ್ತೊಂದು ಮಗು ಹಲ್ಲೆ ನಡೆಸುತ್ತಿರುವುದು. 
ರಾಜ್ಯ

ಡೇ ಕೇರ್'ನಲ್ಲಿ ಮಗು ಮೇಲೆ ಹಲ್ಲೆ ಪ್ರಕರಣ: ತನಿಖೆ ನಡೆಸುವಂತೆ ಶಿಕ್ಷಣ ಇಲಾಖೆಗೆ ಸೂಚನೆ

ನಗರದ ಮಕ್ಕಳ ಡೇ ಕೇರ್ ಸೆಂಟರ್ ವೊಂದರಲ್ಲಿ 2 ವರ್ಷದ ಹೆಣ್ಣು ಮಗುವಿನ ಮೇಲೆ ಹಲ್ಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಶಿಕ್ಷಣ ಇಲಾಖೆಗೆ ಪೊಲೀಸರು ಸೂಚನೆ ನೀಡಿದ್ದಾರೆ.

ಬೆಂಗಳೂರು: ನಗರದ ಮಕ್ಕಳ ಡೇ ಕೇರ್ ಸೆಂಟರ್ ವೊಂದರಲ್ಲಿ 2 ವರ್ಷದ ಹೆಣ್ಣು ಮಗುವಿನ ಮೇಲೆ ಹಲ್ಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಶಿಕ್ಷಣ ಇಲಾಖೆಗೆ ಪೊಲೀಸರು ಸೂಚನೆ ನೀಡಿದ್ದಾರೆ.

ಘಟನೆ ಬಳಿಕ ಮಗುವಿನ ಪೋಷಕರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದರು. ಬಳಿಕ ಪೊಲೀಸರಿಗೆ ದೂರು ನೀಡಲು ನಿರಾಕರಿಸಿದರು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯನ್ನ ಸಂಪರ್ಕಿಸಿ, ತನಿಖೆ ನಡೆಸುವಂತೆ ತಿಳಿಸಲಾಗಿದೆ ಎಂದು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಹೇಳಿದ್ದಾರೆ.

ಇಬ್ಬಿಬ್ಬರು ಮಕ್ಕಳನ್ನು ಶೌಚಾಲಯಕ್ಕೆ ಕರೆದೊಯ್ಯಬೇಕಾಗಿದ್ದ ಕಾರಣ ಅಟೆಂಡರ್ ಮಕ್ಕಳನ್ನು ಕೆಲವು ನಿಮಿಷಗಳ ಕಾಲ ಒಂಟಿಯಾಗಿ ಬಿಟ್ಟಿದ್ದರು. ಇತರ ಅಟೆಂಡೆಂಟ್‌ಗಳು ಕಾರ್ಯನಿರತರಾಗಿದ್ದರು. ಕೆಲವರು ಅನಾರೋಗ್ಯ ನಿಮಿತ್ತ ರಜೆ ಪಡೆದುಕೊಂಡಿದ್ದರು. ಹೀಗಾಗಿ ಪೋಷಕರು ದೂರು ನೀಡದಿರಲು ನಿರ್ಧರಿಸಿದ್ದರು. ಹೀಗಾಗಿ ಪ್ರಕರಣ ತನಿಖೆಯನ್ನು ಪೊಲೀಸ್ ಇಲಾಖೆ ನಡೆಸುತ್ತಿಲ್ಲ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಶಾಲಾ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವೇ ಎಂಬುದನ್ನು ತಿಳಿಯಲು ಶಿಕ್ಷಣ ಇಲಾಖೆಯನ್ನು ಸಂಪರ್ಕಿಸಲಾಗಿದೆ. ಘಟನೆಯ ಬಗ್ಗೆ ಶಿಕ್ಷಣ ಇಲಾಖೆಯೇ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ.

ಉತ್ತರಹಳ್ಳಿ ಸಮೀಪದ ಚಿಕ್ಕಲ್ಲಸಂದ್ರದಲ್ಲಿ ಇರುವ ಟೆಂಡರ್ ಫೂಟ್ ಎಂಬ ಡೇ ಕೇರ್ ಸೆಂಟರ್ ನಲ್ಲಿ 2 ವರ್ಷದ ಮಗುವಿನ ಮೇಲೆ 3 ವರ್ಷದ ಮಗುವೊಂದು ಹಲ್ಲೆ ನಡೆಸಿ, ಗಾಯಗೊಳಿಸಿತ್ತು.

ಮಗು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಪೋಷಕರು ಮಗುವಿನ ಕೈಯಲ್ಲಿ ಕಚ್ಚಿದ ಗುರುತುಗಳು ಮತ್ತು ಮೂಗೇಟುಗಳಿರುವುದನ್ನು ಗಮನಿಸಿದ್ದಾರೆ. ಕೂಡಲೇ ಶಾಲೆಯ ಬಳಿ ಬಂದು ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ್ದು, ಕೂಡಲೇ ಡೇ ಕೇರ್ ಸೆಂಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!