ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬ್ರ್ಯಾಂಡ್ ಬೆಂಗಳೂರು: ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾಗಿ ಸಲಹೆ ಪಡೆದ ಡಿ.ಕೆ. ಶಿವಕುಮಾರ್

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮುಂದಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ ಮಾತುಕತೆ ನಡೆಸಿದರು.

ಮಾಜಿ ಸಿಎಂ ಬೊಮ್ಮಾಯಿಯವರೊಂದಿಗೆ ಮಾತುಕತೆ ನಡೆಸುತ್ತಿರುವ ಡಿಸಿಎಂ ಡಿಕೆ.ಶಿವಕುಮಾರ್.
Manjula VN
Updated On : 24 Jun 2023, 12:40 pm

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮುಂದಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ ಮಾತುಕತೆ ನಡೆಸಿದರು.

ಬೊಮ್ಮಾಯಿ ಅವರ ರೇಸ್ ಕೋರ್ಸ್ ರಸ್ತೆಯ ಸರ್ಕಾರಿ ರೇಸ್‌ವ್ಯೂ ಕಾಟೇಜ್​ಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರನ್ನು ಹೂಗುಚ್ಛ ನೀಡಿ ಬೊಮ್ಮಾಯಿ ಅವರು ಸ್ವಾಗತ ಕೋರಿದರು.

ಇದಕ್ಕೆ ಪ್ರತಿಯಾಗಿ ಬೊಮ್ಮಾಯಿ ಅವರಿಗೂ ಶಾಲು ಹೊದಿಸಿ, ಹೂಗುಚ್ಛ ನೀಡಿದ ಡಿಕೆ.ಶಿವಕುಮಾರ್ ಅವರು ಧನ್ಯವಾದ ತಿಳಿಸಿದರು.

Advertisement

Advertisement

ಬಳಿಕ ಉಭಯ ನಾಯಕರು ಕೆಲಕಾಲ ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿದರು. ಬಳಿಕ ಬ್ರ್ಯಾಂಡ್ ಬೆಂಗಳೂರು ಸಂಬಂಧ ಉಭಯ ನಾಯಕರು ಮಾತುಕತೆ ನಡೆಸಿದರು.

ಮಾತುಕತೆ ವೇಳೆ ಬೆಂಗಳೂರು ಅಭಿವೃದ್ಧಿ ಕುರಿತು ಯಾವ ರೀತಿಯ ಯೋಜನೆ ಜಾರಿಗೆ ತರಬಹುದು ಎನ್ನುವುದು ಸೇರಿದಂತೆ ನಗರದ ಅಭಿವೃದ್ಧಿಗೆ ಪೂರಕವಾಗಿ ಅಗತ್ಯ ಸಲಹೆಗಳನ್ನು ಡಿಕೆ.ಶಿವಕುಮಾರ್ ಅವರು ಪಡೆದುಕೊಂಡರು.

ಇದನ್ನೂ ಓದಿ: ಬ್ರ್ಯಾಂಡ್​ ಬೆಂಗಳೂರು, ಬೆಟರ್ ಬೆಂಗಳೂರು ನಿರ್ಮಾಣಕ್ಕೆ ಸಮಿತಿ ರಚನೆ: ಡಿಸಿಎಂ ಡಿಕೆ ಶಿವಕುಮಾರ್​

ಈ ಹಿಂದೆ ಸಿಎಂ ಆಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಬಸವರಾಜ ಬೊಮ್ಮಾಯಿ ಕೆಲಸ ನಿರ್ವಹಿಸಿದ್ದರು. ಈಗ ತಾವು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಕಾರಣ ಬೊಮ್ಮಾಯಿ ಅವರಿಂದ ಬ್ರ್ಯಾಂಡ್ ಬೆಂಗಳೂರು ಸಂಬಂಧ ಸಮಾಲೋಚನೆ ನಡೆಸಿ ಸಲಹೆಗಳನ್ನು ಪಡೆದುಕೊಂಡಿದ್ದಾರೆ.

ಮಾತುಕತೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು 2 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿ, ಬೆಂಗಳೂರಿನ ಅಭಿವೃದ್ಧಿಗೆ ಕೆಲವು ಉತ್ತಮ ಯೋಜನೆ ಹಾಕಿಕೊಂಡಿದ್ದರು. ಆ ಯೋಜನೆಗಳು ಇನ್ನೂ ಜಾರಿಯಾಗಿಲ್ಲ. ಹೀಗಾಗಿ ಅವರನ್ನು ಭೇಟಿ ಮಾಡಿ ಅವರ ಸಲಹೆ, ಅಭಿಪ್ರಾಯ ಪಡೆದಿದ್ದೇನೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿಯಾದ ಬಳಿಕ ಮಾಜಿ ಮುಖ್ಯಮಂತ್ರಿಗಳಾಗಿ ಬೆಂಗಳೂರು ಅಭಿವೃದ್ಧಿಗೆ ತಮ್ಮದೇ ಆದ ಯೋಜನೆಗಳನ್ನು ಹಾಕಿಕೊಂಡಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಎಸ್‌.ಎಂ. ಕೃಷ್ಣ, ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿದ್ದೇನೆ. ಬೆಂಗಳೂರು ಅಭಿವೃದ್ಧಿ ಕುರಿತು ಚರ್ಚಿಸಿ ಸಲಹೆ ಪಡೆದುಕೊಂಡಿದ್ದೇನೆ. ಆದರೆ ಕುಮಾರಸ್ವಾಮಿ ಅವರು ಇರಲಿಲ್ಲ. ಸಾಧ್ಯವಾದರೆ ಅವರನ್ನೂ ಭೇಟಿ ಮಾಡುತ್ತೇನೆ. ಎಲ್ಲರ ಅನುಭವ ಅವರ ವಿಚಾರಧಾರೆ ಕೇಳಿ ಪಡೆಯುತ್ತೇನೆ. ಬ್ರ್ಯಾಂಡ್ ಬೆಂಗಳೂರು ಮಾಡುವುದು ನನ್ನ ಗುರಿ. ಹಾಗಾಗಿ ಎಲ್ಲ ಪಕ್ಷಗಳ ನಾಯಕರ ಭೇಟಿ ಮಾಡಿ ಸಲಹೆ ಪಡೆದುಕೊಳ್ಳಲಿದ್ದೇನೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments