ಗೃಹ ಜ್ಯೋತಿ ಯೋಜನೆ 
ರಾಜ್ಯ

'ಗೃಹ ಜ್ಯೋತಿ' ಯೋಜನೆ ನೋಂದಣಿಗೆ 20 ರೂ.ಗಿಂತ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ಸರ್ಕಾರದ ಎಚ್ಚರಿಕೆ

ರಾಜ್ಯದಲ್ಲಿ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನ್ನು ಒದಗಿಸುವ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸುವಾಗ ಹಣ ಕೇಳುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. 

ಬೆಂಗಳೂರು: ರಾಜ್ಯದಲ್ಲಿ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನ್ನು ಒದಗಿಸುವ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸುವಾಗ ಹಣ ಕೇಳುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. 

ಗೃಹ ಜ್ಯೋತಿಯ ನೋಂದಣಿ ಸಂಪೂರ್ಣ ಉಚಿತವಾಗಿದೆ, ಸರ್ಕಾರ ನಿಗದಿಪಡಿಸಿದ ಸೇವಾ ಶುಲ್ಕ 20 ರೂಪಾಯಿಗಳನ್ನು ಹೊರತುಪಡಿಸಿ ನೋಂದಣಿಗಾಗಿ ಗ್ರಾಹಕರು ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. 

ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಗ್ರಾಹಕರಿಂದ 20 ರೂಪಾಯಿಗಿಂತ ಹೆಚ್ಚುವರಿ ನೋಂದಣಿ ಶುಲ್ಕ ವಸೂಲಿ ಮಾಡುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿದೆ. ಯಾವುದೇ ಕೇಂದ್ರಗಳು ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರದ ಅಧಿಕೃತ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಸಾರ್ವಜನಿಕರಿಂದ ಹಣ ಪಡೆದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. 

ನಂತರ ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಅವರು ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಕೆಲವರು ವೈಯಕ್ತಿಕವಾಗಿ ಹಾಗೂ ಕೆಲವು ಏಜೆನ್ಸಿ ಮೂಲಕ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಅರ್ಜಿ ಸಲ್ಲಿಸಲು ನೀವು ಯಾರಿಗೂ ಲಂಚ ನೀಡಬೇಕಾಗಿಲ್ಲ. ನೀವೇ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಸಾರ್ವಜನಿಕರಿಂದ ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

34 ಲಕ್ಷ ಮಂದಿ ನೋಂದಣಿ: ಗೃಹ ಜ್ಯೋತಿ ಯೋಜನೆಗೆ ಮೊನ್ನೆ ನಿನ್ನೆ ಶುಕ್ರವಾರದವರೆಗೆ 30 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್