ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕೂಡಲಸಂಗಮ ಪಂಚಮಸಾಲಿ ಮಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಕಾಂಗ್ರೆಸ್‌ ಶಾಸಕರ ನಿಯೋಗ. 
ರಾಜ್ಯ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಅಧಿವೇಶನ ಬಳಿಕ ತಜ್ಞರೊಂದಿಗೆ ಸಭೆ ನಡೆಸುತ್ತೇನೆ- ಸಿಎಂ ಸಿದ್ದರಾಮಯ್ಯ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಬಜೆಟ್‌ ಅಧಿವೇಶನದ ಬಳಿಕ ಕಾನೂನು ಮತ್ತು ಸಂವಿಧಾನ ತಜ್ಞರೊಂದಿಗೆ ಸಭೆ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭರವಸೆ ನೀಡಿದರು.

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಬಜೆಟ್‌ ಅಧಿವೇಶನದ ಬಳಿಕ ಕಾನೂನು ಮತ್ತು ಸಂವಿಧಾನ ತಜ್ಞರೊಂದಿಗೆ ಸಭೆ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭರವಸೆ ನೀಡಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಒದಗಿಸುವಂತೆ ಕೋರಿ ಕೂಡಲಸಂಗಮ ಪಂಚಮಸಾಲಿ ಮಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಕಾಂಗ್ರೆಸ್‌ ಶಾಸಕರ ನಿಯೋಗವು ನಿನ್ನೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಹಿಂದಿನ ಸರ್ಕಾರ ಮೀಸಲಾತಿ ವಿಚಾರದಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಗೊಂದಲ ಸೃಷ್ಟಿಸಿದೆ. ಮೀಸಲಾತಿ ಸಾಂವಿಧಾನಿಕವಾಗಿ ಊರ್ಜಿತ ಆಗುವುದಿಲ್ಲ ಎಂದು ಬಿಜೆಪಿಗೆ ಮೊದಲೇ ಗೊತ್ತಿತ್ತು. ಆದರೂ, ಪಂಚಮಸಾಲಿ ಸಮುದಾಯಕ್ಕೆ ಮೂಗಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರಿದೆ ಎಂದು ಕಿಡಿಕಾರಿದರು.

ಬಳಿಕ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳ ಭೇಟಿ ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಕುಮಾರಕೃಪ ಅತಿಥಿಗೃಹದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿತು.

ಈ ವೇಳೆ ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ಪಂಚಮಸಾಲಿ ಪಟ್ಟಿಗೆ ಸೇರಿಸಬೇಕು ಎಂದು ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT