ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: 44 ಬೈಕ್'ಗಳ ಕದ್ದಿದ್ದ ಇಬ್ಬರು ಅಪ್ರಾಪ್ತ ಬಾಲಕರ ಬಂಧನ

ನಗರದಲ್ಲಿ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಅಪ್ರಾಪ್ತ ಬಾಲಕರು ಜೆಪಿ.ನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು: ನಗರದಲ್ಲಿ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಇಬ್ಬರು ಅಪ್ರಾಪ್ತ ಬಾಲಕರು ಜೆಪಿ.ನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಈ ಇಬ್ಬರು ಅಪ್ರಾಪ್ತ ಬಾಲಕರು ಕೆ.ಆರ್.ಪುರಂ ನಿವಾಸಿಗಳಾಗಿದ್ದು, ಬಾಲಕರಿಂದ 35 ಲಕ್ಷ ಮೌಲ್ಯದ 44 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮನೆ ಮುಂದೆ, ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಅವರು ಕಳವು ಮಾಡುತ್ತಿದ್ದರು. ಅಂತೆಯೇ ಜೆಪಿ.ನಗರದ 1ನೇ ಹಂತ ನಿವಾಸಿ ವರುಣ್ ಎಂಬುವರ ಬೈಕ್ ಕಳ್ಳತನವಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಸೇರಿದಂತೆ ತಾಂತ್ರಿಕ ಮಾಹಿತಿ ಆಧರಿಸಿ ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ.

ಇಬ್ಬರು ಬಾಲಕರ ವಿರುದ್ಧ ಕಾಡುಗೋಡಿ, ಎಚ್‌ಎಎಲ್, ಕೆಆರ್ ಪುರಂ, ಬನಶಂಕರಿ ಮತ್ತಿತರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ವಿಚಾರಣೆ ವೇಳೆ ಬಾಲಕರು ತಪ್ಪೊಪ್ಪಿಕೊಂಡಿದ್ದಾರೆ. ಸುಲಭವಾಗಿ ಹಣ ಗಳಿಸುವ ಸಲುವಾಗಿ ಕಳ್ಳತನ ಮಾರ್ಗ ಹಿಡಿದಿರುವುದಾಗಿ ಹೇಳಿಕೊಂಡಿದ್ದಾರೆ.

ದ್ವಿಚಕ್ರ ವಾಹನಗಳ ಮಾರಾಟ ಮಾಡುವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇವೆಂದು ಹೇಳುತ್ತಿದ್ದ ಬಾಲಕರು ರೂ.4,000-5,000ಕ್ಕೆ ವಾಹನಗಳನ್ನು ಮಾಡುತ್ತಿದ್ದರು. ಮಾರಾಟ ಸಂದರ್ಭದಲ್ಲಿ ದಾಖಲೆಗಳನ್ನು ನಂತರ ನೀಡುತ್ತೇವೆಂದು ಹೇಳುತ್ತಿದ್ದೆವು ಎಂದು ಹೇಳಿದ್ದಾರೆ.

ಇಬ್ಬರೂ ಬಾಲಕರು ಅವಿದ್ಯಾವಂತರಾಗಿದ್ದು, ಇಬ್ಬರಿಗೂ ಪುನರ್ವಸತಿ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT