ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: ಜಗಳದಿಂದ ಬೇಸತ್ತು ಹೊಂಡಕ್ಕೆ ಹಾರಿದ್ದ ಪತ್ನಿ; ರಕ್ಷಿಸಲು ಹೋದ ಪತಿಯೂ ಸಾವು, ಅನಾಥರಾದ ಮಕ್ಕಳು!

ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ಬೇಸತ್ತು ಮಹಿಳೆಯೊಬ್ಬರು ಹೊಂಡಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪತಿಯೂ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ತೋಟದಲ್ಲಿ ನಡೆದಿದೆ.

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ಬೇಸತ್ತು ಮಹಿಳೆಯೊಬ್ಬರು ಹೊಂಡಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪತಿಯೂ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ತೋಟದಲ್ಲಿ ನಡೆದಿದೆ.

ಮೃತರನ್ನು ಯಶೋಧ ಹಾಗೂ ಇಮ್ಯಾನುವಲ್ ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಜಗಳವಾಗಿತ್ತು. ಇದರಿಂದ ಮನನೊಂದ ಯಶೋಧ ತೋಟದಲ್ಲಿದ್ದ ಹೊಂಡಕ್ಕೆ ಹಾರಿದ್ದರು. ಈ ವೇಳೆ ಪತ್ನಿಯನ್ನು ರಕ್ಷಿಸಲು ಹೋಗಿದ್ದ ಇಮ್ಯಾನುವಲ್ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಪೋಷಕರ ಸಾವಿನಿಂದಾಗಿ ಮಕ್ಕಳಿಬ್ಬರು ಅನಾಥರಾಗಿದ್ದಾರೆ. ಮೃತ ದಂಪತಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದವರಾಗಿದ್ದು, ತೋಟದ ಕೆಲಸಕ್ಕಾಗಿ ಕಾರ್ಕಳದ ನಲ್ಲೂರಿಗೆ ಬಂದು ವಾಸವಾಗಿದ್ದರು. ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel