ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಶೌಚಾಲಯದ ವಿಡಿಯೋ ಸೆರೆ ಹಿಡಿದಿದ್ದ ವಿದ್ಯಾರ್ಥಿ ಬಂಧನ

ಅಪಾರ್ಟ್ ಮೆಂಟ್ ನಲ್ಲಿ ಶೌಚಾಲಯಕ್ಕೆ ತೆರಳಿದ ಮಹಿಳೆಯ ವಿಡಿಯೋ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಮಹಾದೇವಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಶೌಚಾಲಯಕ್ಕೆ ತೆರಳಿದ ಮಹಿಳೆಯ ವಿಡಿಯೋ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಮಹಾದೇವಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಹೂಡಿಯ ತಿಗಳರಪಾಳ್ಯದ ನಾಲ್ವರು ಮಹಿಳೆಯರು ಗುರುವಾರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ವಿದ್ಯಾರ್ಥಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಐಟಿಪಿಎಲ್ ಮುಖ್ಯರಸ್ತೆಯಲ್ಲಿರುವ ತಮ್ಮ ಅಪಾರ್ಟ್‌ಮೆಂಟ್ ಪಕ್ಕದಲ್ಲಿರುವ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಿದ್ಯಾರ್ಥಿ ವಾಸವಿದ್ದು, ವಿದ್ಯಾರ್ಥಿ ಹಾಗೂ ಆತನ ಸ್ವೇಹಿತರು ಶೌಚಾಲಯದಲ್ಲಿದ್ದಾಗ ಫೋಟೋ ಹಾಗೂ ವಿಡಿಯೋಗಳ್ನು ಮಾಡಿದ್ದಾರೆಂದು ಮಹಿಳೆಯರು ದೂರಿನಲಲಿ ಹೇಳಿಕೊಂಡಿದ್ದಾರೆ.

ಅಪಾರ್ಟ್ ಮೆಂಟ್ ಹಾಗೂ ವಸತಿ ಗೃಹದ ನಡುವೆ ಸ್ಥಳವಿದ್ದು, ಈ ಸ್ಥಳದಲ್ಲಿ ನಿಂತು ವಿದ್ಯಾರ್ಥಿಗಳು ಶೌಚಾಲಯದಲ್ಲಿನ ವಿಡಿಯೋ ಮಾಡಿದ್ದಾರೆ. ವಿಡಿಯೋ ಮಾಡುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾರೆ.

ಈ ವೇಳೆ ಮಹಿಳೆ ಮೊಬೈಲ್ ಫೋನ್ ನ್ನು ಪರಿಶೀಲನೆ ನಡೆಸಿದ್ದು, ಫೋನ್ ನಲ್ಲಿ ನಗ್ನ ಚಿತ್ರಗಳು ಹಾಗೂ ವಿಡಿಯೋಗಳಿರುವುದು ಕಂಡು ಬಂದಿದೆ.

ದೂರು ನೀಡಿರುವ ನಾಲ್ವರು ಮಹಿಳೆಯರು ಈಶಾನ್ಯ ರಾಜ್ಯಗಳಿಂದ ಬಂದಿದ್ದು, ನಗರದಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ವಿದ್ಯಾರ್ಥಿ ಹಾಗೂ ಆತನ ಸ್ನೇಹಿತರು ಕಳೆದ 6 ತಿಂಗಳುಗಳಿಂದ ವಿಡಿಯೋ ಹಾಗೂ ಫೋಟೋಗಳನ್ನು ಸೆರೆ ಹಿಡಿಯುತ್ತಿರುವುದಾಗಿ ದೂರಿನಲ್ಲಿ ಹೇಳಿಕೊಂಡಿದ್ದಾರೆ.

ಬಂಧಿತ ವಿದ್ಯಾರ್ಥಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮೂಲದವನಾಗಿದ್ದು. ಆತನ ಫೋನ್ ವಶಕ್ಕೆ ಪಡೆದಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಕರಣ ಸಂಬಂಧ ಮಹಿಳೆಯರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಇತರ ಆರೋಪಿಗಳಿಗಾಗಿ ಹುಡುಕಾಡ ಆರಂಬಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT