ಕಲಬುರಗಿ: ತಾಂತ್ರಿಕ ದೋಷದಿಂದ ಜಮೀನಿನಲ್ಲಿ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶ
ಟೇಕಾಫ್ ಆದ ನಂತರ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ನಿರತ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಕಲಬುರಗಿ: ಟೇಕಾಫ್ ಆದ ನಂತರ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ನಿರತ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ವಿಮಾನ ಭೂಸ್ಪರ್ಶವಾಗಿದ್ದು ಕಲಬುರಗಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿ.ಮೀ ಸಂಚರಿಸಿತ್ತು.
ಆದರೆ ಇಂಜಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೂಡಲೇ ಎಚ್ಚೆತ್ತ ಪೈಲೆಟ್, ಸೀರೂರ್ ಗ್ರಾಮದ ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ.
ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವಿಮಾನದಲ್ಲಿದ್ದ ಪೈಲಟ್ ಹಾಗೂ ತರಬೇತಿ ನಿತರ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.