ಇಂಧನ ಸಚಿವ ಕೆಜೆ ಜಾರ್ಜ್ ಮತ್ತಿತರರ ಚಿತ್ರ 
ರಾಜ್ಯ

ರಾಜ್ಯದಲ್ಲಿ ಮುಂಗಾರು ವಿಳಂಬ, ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಿಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದ್ದು, ವಿದ್ಯುತ್ ಉತ್ಪಾದನೆಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ತಿಳಿಸಿದ್ದಾರೆ.

ಬಳ್ಳಾರಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದ್ದು, ವಿದ್ಯುತ್ ಉತ್ಪಾದನೆಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಕುಡತಿನಿ ಬಳಿಯಿರುವ "ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ"ಕ್ಕೆ  ಭೇಟಿ ನೀಡಿ ವಿದ್ಯುತ್ ಉತ್ಪಾದನೆ ಕುರಿತು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂಗಾರು ಸ್ವಲ್ಪ ವಿಳಂಬವಾಗಿದ್ದರೂ ಮುಂದಿನ ದಿನಗಳಲ್ಲಿ ಮಳೆಯಾಗುವ ಆಶಾಭಾವನೆ ಇದೆ. ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ರಾಜ್ಯದಲ್ಲಿರುವ ಶಾಖೋತ್ಪನ್ನ ಕೇಂದ್ರಗಳನ್ನು ಬಲಪಡಿಸಲಾಗುವುದು, ಶಾಖೋತ್ಪನ್ನ ಕೇಂದ್ರಗಳಲ್ಲಿ  ಕಲ್ಲಿದ್ದಲಿನ ಕೊರತೆ ಇಲ್ಲ. ಕಲ್ಲಿದ್ದಲಿನ ಗುಣಮಟ್ಟ ಕಾಯ್ದುಕೊಳ್ಳಲು ತಿಳಿಸಲಾಗಿದೆ. ಸೌರ ವಿದ್ಯುತ್ ಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಎಲೆಕ್ಟ್ರಾನಿಕ್ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಚಾರ್ಜಿಂಗ್ ಸ್ಟೇಷನ್ ಗಳನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. 

ಗೃಹ ಜ್ಯೋತಿ ಯೋಜನೆಯನ್ನು ಜುಲೈಯಿಂದಲೇ ಅನುಷ್ಠಾನ ಗೊಳಿಸಲಾಗುವುದು. 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಆಗಸ್ಟ್ ತಿಂಗಳಿಂದ 'ಶೂನ್ಯ' ಬಿಲ್ ನೀಡಲಾಗುತ್ತದೆ. ಅದಕ್ಕಿಂತ ಹೆಚ್ಚಿನ ಯೂನಿಟ್ ಬಳಸಿದಲ್ಲಿ ಬಳಕೆ ಮಾಡಿದ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದರು. 

ರಾಜ್ಯದಲ್ಲಿ 2.16 ಕೋಟಿ ಜನರು ಗೃಹಜ್ಯೋತಿ ಫಲಾನುಭವಿಗಳಿದ್ದು, ಅದರಲ್ಲಿ 2.14 ಕೋಟಿ ಜನರು ಅರ್ಹರಿದ್ದಾರೆ. ನಾವೂ ನೀಡಿದ ಆಶ್ವಾಸನೆಯಂತೆ ಜನರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದ ಸಚಿವರು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಸೆಪ್ಟೆಂಬರ್ ನಲ್ಲೇ ವಿದ್ಯುತ್ ದರ ಏರಿಕೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಮೇ 12 ರಿಂದ ವಿದ್ಯುತ್ ದರ ಹೆಚ್ಚಿಸಲಾಗಿದೆ. ಆದ್ದರಿಂದ ವಿದ್ಯುತ್ ದರ ಹೆಚ್ಚಳಕ್ಕೂ ಗೃಹಜ್ಯೋತಿ ಯೋಜನೆಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ