ಸಿಎಂ ಸಿದ್ದರಾಮಯ್ಯ 
ರಾಜ್ಯ

ಕಾಂಗ್ರೆಸ್‌ನಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಿಎಂ ಸಿದ್ದರಾಮಯ್ಯ

ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬರಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಬೆಂಗಳೂರು: ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬರಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಮಹಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬರುವ ಲೋಕಸಭೇಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ, ಬಿಜೆಪಿಯನ್ನು ಹೋಗಲಾಡಿಸಲು ಹೋರಾಡಬೇಕು. ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲು ಕಾರ್ಯಕರ್ತರು ಹೋರಾಡಬೇಕು ಎಂದು ಕರೆ ನೀಡಿದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ, ಬಿಜೆಪಿಯ ಸೋಲುವಂತೆ ಮಾಡಬೇಕು. ಕೇಂದ್ರದಲ್ಲಿ ಬಿಜೆಪಿಯೇತರ ಸರಕಾರ ಮಾತ್ರವೇ ದೀನದಲಿತರನ್ನು ಮೇಲಕ್ಕೆತ್ತಲು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಾಧ್ಯ. ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ವಾತಂತ್ರ್ಯ ಹೋರಾಟದ ರೀತಿಯ ಚಳವಳಿ ನಡೆಸಬೇಕಿದೆ ಎಂದು ಹೇಳಿದರು.

ಇದೇ ವೇಳೆ ಅಚ್ಛೇ ದಿನ್ ಘೋಷಣೆಯನ್ನು ಲೇವಡಿ ಮಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರು ಕಪ್ಪುಹಣವನ್ನು ವಾಪಸ್ ಪಡೆದು ಪ್ರತಿಯೊಬ್ಬ ನಾಗರಿಕನ ಖಾತೆಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. 9 ವರ್ಷಗಳಲ್ಲಿ 18 ಕೋಟಿ ಜನರು ಉದ್ಯೋಗಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇಂಧನ, ಸಿಮೆಂಟ್ ಮತ್ತು ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದೆ.  ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಮೋದಿ ಹೇಳುತ್ತಿದ್ದಾರೆ, ಆದರೆ, ಹಿಂದಿನ ಬಿಜೆಪಿ ಸರ್ಕಾರವು ಶೇ.40 ಕಮಿಷನ್‌ ದಂಧೆಯಲ್ಲಿ ಮುಳುಗಿದೆ ಕಿಡಿಕಾರಿದರು.

ಬಡವರು, ಅಲ್ಪಸಂಖ್ಯಾತರು ಭಯದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಕೇಂದ್ರ ಹಾಗೂ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರವನ್ನು ತೊಡೆದುಹಾಕುವುದು ಕಾಂಗ್ರೆಸ್ ಪಕ್ಷದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ