ಸಂಗ್ರಹ ಚಿತ್ರ 
ರಾಜ್ಯ

ವೇಗವಾಗಿ ಬಂದ ಕಾರು ಡಿಕ್ಕಿ: ಪಾದಚಾರಿ ದುರ್ಮರಣ

ಅತಿ ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ಬೆಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ರಾಜಾಜಿನಗರದ ಡಾ.ರಾಜ್ ಕುಮಾರ್ ರಸ್ತೆಯ ಸುಗುಣ ಆಸ್ಪತ್ರೆಯ ಸಮೀಪ ಅಪಘಾತ ಸಂಭವಿಸಿದೆ. ಮೃತ ಪಾದಚಾರಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಸುಮಾರು 55 ವರ್ಷದ ಪುರುಷ ವ್ಯಕ್ತಿ ಬಿಳಿ ಅಂಗಿ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ಇರಿಸಲಾಗಿದ್ದು, ಮೃತನ ಗುರುತು ಪತ್ತೆಗೆ ಪ್ರಯತ್ನಿಸಲಾಗುತ್ತಿದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!