ರಾಜ್ಯ

ಮಡಿಕೇರಿ ಕೆಡಿಪಿ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಅರಕಲಗೂಡು ಶಾಸಕ ಎ.ಮಂಜು

Lingaraj Badiger

ಮಡಿಕೇರಿ: ಮಡಿಕೇರಿಯ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಅರಕಲಗೂಡು ಶಾಸಕ ಎ.ಮಂಜು ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದರು.

ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ತಂದೆಯೂ ಆಗಿರುವ ಎ.ಮಂಜು ಅವರು ನಾಮನಿರ್ದೇಶಿತ ಸದಸ್ಯರಾಗಿ ಹಾಗೂ ಜಿಲ್ಲಾ ಪಂಚಾಯತ್ ವಿಶೇಷ ಆಹ್ವಾನಿತರಾಗಿ ಸಭೆಯಲ್ಲಿ ಭಾಗವಹಿಸಿದ್ದರು.

ಶಾಸಕ ಮಂಜು ಅವರು ರಾಜ್ಯ ಭೂ ಅಭಿವೃದ್ಧಿ ಬ್ಯಾಂಕ್(ಎಸ್‌ಎಲ್‌ಡಿಪಿ) ನಿರ್ದೇಶಕರಾಗಿರುವ ಕಾರಣ ಕೆಡಿಪಿ ಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿತ್ತು ಎಂದು ಜಿಪಂ ಮೂಲಗಳು ಖಚಿತಪಡಿಸಿವೆ. 

''ಜಿಲ್ಲೆಯ ನಾಮನಿರ್ದೇಶಿತ ಸದಸ್ಯರಾಗಿದ್ದು, ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮಂಜು ಅವರಿಗೆ ಆಹ್ವಾನ ನೀಡಲಾಗಿತ್ತು. ಜಿಲ್ಲಾ ಅಧಿಕಾರಿಗಳು ಮತ್ತು ಸಚಿವರೊಂದಿಗೆ ವೇದಿಕೆಯಲ್ಲಿ ಕುಳಿತುಕೊಳ್ಳುವ ಹಕ್ಕು ಕೂಡ ಅವರಿಗೆ ಇತ್ತು. ಆದಾಗ್ಯೂ, ಅವರು ಇತರ ಅಧಿಕಾರಿಗಳ ಜೊತೆ ಕುಳಿತುಕೊಳ್ಳಲು ನಿರ್ಧರಿಸಿದರು ಮತ್ತು ಸಭೆಯಲ್ಲಿ ಭಾಗವಹಿಸಿದರು ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಆಕಾಶ್ ಅವರು ತಿಳಿಸಿದ್ದಾರೆ.

ಏತನ್ಮಧ್ಯೆ, ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎ.ಮಂಜು, ತಮ್ಮ ಪುತ್ರ ಡಾ.ಮಂತರ್ ನೇತೃತ್ವದ ಸಭೆ ವೀಕ್ಷಿಸಲು ನನಗೆ ಅವಕಾಶ ಸಿಕ್ಕಿದ್ದಕ್ಕೆ ಸಂತೋಷವಾಗಿದೆ ಎಂದರು. 

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 10 ಕಿಲೋ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದು, ಯಾವುದೇ ಬೆಲೆ ತೆತ್ತಾದರೂ ಅದನ್ನು ಈಡೇರಿಸುವುದು ಅವರ ಕರ್ತವ್ಯವಾಗಿದೆ. ಇದಕ್ಕೆ ಬಿಜೆಪಿಯನ್ನು ದೂರುವುದು ಸರಿಯಲ್ಲ ಎಂದರು.

SCROLL FOR NEXT