ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ 
ರಾಜ್ಯ

ಬೆಂಗಳೂರು ನಂದು: ಸ್ವಾಮೀಜಿ ಸಮ್ಮುಖದಲ್ಲೇ ಡಿಕೆಶಿ- ಅಶ್ವತ್ಥನಾರಾಯಣ ವಾಗ್ಯುದ್ಧ; ಇಬ್ಬರಿಗೂ ಚುಂಚಶ್ರೀ ಕಿವಿಮಾತು!

ಸದಾಶಿವನಗರದ ರಮಣಮಹರ್ಷಿ ಉದ್ಯಾನವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಅಶ್ವತ್ಥ ನಾರಾಯಣ ಮಾತಿನ ಕಾಳಗ ನಡೆಯಿತು.

ಬೆಂಗಳೂರು: ಸದಾಶಿವನಗರದ ರಮಣಮಹರ್ಷಿ ಉದ್ಯಾನವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಅಶ್ವತ್ಥ ನಾರಾಯಣ ಮಾತಿನ ಕಾಳಗ ನಡೆಯಿತು.

ಕೆಂಪೇಗೌಡ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ ನನ್ನ ವಿದ್ಯಾಭ್ಯಾಸ ಆರಂಭಿಸಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಕೆಂಪೇಗೌಡರು ಕಟ್ಟಿದ ಪ್ರದೇಶ. ತಮಿಳುನಾಡಿನ ಗಡಿ ಭಾಗದಲ್ಲಿ ಸಂಗಮದ ಬಳಿ ಕೆಂಪೇಗೌಡರ ಕೋಟೆ ಇದೆ. ಅದರ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಆ ಕೋಟೆ ಸಮೀಪ ನಿಜಲಿಂಗಪ್ಪ ಅವರ ಮನೆ ಪಕ್ಕ ವೀರೇಂದ್ರ ಪಾಟೀಲ್ ಅವರ ಮನೆ ಇದೆ. ಅದರ ಪಕ್ಕದಲ್ಲಿ ನನ್ನ ತಂದೆ ದೊಡ್ಡಆಲಹಳ್ಳಿ ಕೆಂಪೇಗೌಡರ ಮನೆ ಇದೆ. ಇತ್ತೀಚೆಗೆ ಅದನ್ನು ಮಾರಿದ್ದೇನೆ. ಇದು ನನಗೂ ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಇರುವ ಸಂಬಂಧ ಎಂದರು. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ಡಿ.ಕೆ. ಶಿವಕುಮಾರ್‌ ಅವರ ಬಳಿಕ ಮಾತನಾಡಿದ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರು, ʻʻನಾನು ಡಿ.ಕೆ. ಶಿವಕುಮಾರ್‌ ಅವರನ್ನು ಪ್ರಶ್ನೆ ಮಾಡಲು ಒಂದು ಕಾರಣವಿದೆ. ಅವರು ನನಗೂ ರಾಮನಗರಕ್ಕೂ ಏನು ಸಂಬಂಧ ಅಂತ ಪ್ರಶ್ನೆ ಮಾಡಿದ್ರು. ಯಾವ ಸರ್ಕಾರ ಕೂಡ ಕೊಡದಷ್ಟು ಯೋಜನೆಗಳನ್ನು ನಾವು ರಾಮನಗರಕ್ಕೆ ಕೊಟ್ಟಿದ್ದೇವೆ. ರಾಮನಗರ ಅಭಿವೃದ್ಧಿ ಮಾಡಿದ್ದೇವೆ. ಕೆಂಪಾಂಬುದಿಯಲ್ಲಿ ಇವರು ಘೋಷಣೆ ಮಾತ್ರ ಮಾಡಿದರು. ಆದರೆ ನಾವು ಅಭಿವೃದ್ಧಿ ಮಾಡಿದ್ದೇವೆʼʼ ಎಂದರು.

ಈ ನಡುವೆ ಒಕ್ಕಲಿಗ ನಾಯಕರಿಬ್ಬರು ವೇದಿಕೆಯಲ್ಲೇ ಪರಸ್ಪರ ಮಾತಿನ ವರಸೆ ತೋರಿಸಿದ ಬಳಿಕ ಆದಿಚುಂಚನಗಿರಿ ಮಠ ಸಂಸ್ಥಾನದ ನಿರ್ಮಲಾನಂದನಾಥ ಶ್ರೀಗಳು ದ್ಚೇಷ ಬೆಳೆಸಿಕೊಳ್ಳದಂತೆ ಸಂದೇಶ ನೀಡಿದರು. ಪರಸ್ಪರ ದ್ವೇಷ ಬೇಡ, ಜಟಾಪಟಿ ಬೇಡ. ಅಭಿವೃದ್ಧಿಗೆ ಪರಸ್ಪರ ಸಹಕಾರ ಇರಲಿ ಎಂದು ನಿರ್ಮಲಾನಂದನಾಥ ಸ್ವಾಮೀಜಿಗೆ ಇಬ್ಬರಿಗೂ ಸಲಹೆ ನೀಡಿದರು. ಇಬ್ಬರೂ ದ್ವೇಷ ಬೆಳೆಸಿಕೊಳ್ಳಬೇಡಿ ಎಂದು ಮನವಿ ಮಾಡಿದರು.

ಬೆಂಗಳೂರಿನಲ್ಲಿ ಕೆಂಪೇಗೌಡರು ಯಾಕೆ ಹುಟ್ಟಿದರು? ಕೆಂಗಲ್ ಹನುಮಂತಪ್ಪನವರು, ಬಾಲಗಂಗಾಧರನಾಥ ಸ್ವಾಮೀಜಿ ಯಾಕೆ ಹುಟ್ಟಿದ್ರು ಅಂತೆಲ್ಲ ಚರ್ಚೆ ಮಾಡೋಕೆ ಆಗಲ್ಲ. ಈ ಪುಣ್ಯಭೂಮಿಯಲ್ಲಿ ಹುಟ್ಟಿದ್ದಾರೆ. ಅವರವರ ಧರ್ಮಕಾರ್ಯ ನಡೆಸಿದ್ದಾರೆʼʼ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು. ಇಂದು ನಾವು ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಮೂವರು ಮಹನೀಯರನ್ನು ಸ್ಮರಿಸಬೇಕು ಅದು ಕೆಂಪೇಗೌಡ, ಕೆಂಗಲ್ ಹನುಮಂತಯ್ಯ ಹಾಗೂ ಎಸ್.ಎಂ ಕೃಷ್ಣ. ಇವರು ಕಟ್ಟಿರುವ ಬೆಂಗಳೂರನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕು. ಕೆಂಪೇಗೌಡರ ಸ್ಥಂಭ ಹೇಗೆ ಸ್ಮಾರಕವಾಗಿದೆಯೋ ಅದೇ ರೀತಿ ನಾವು ನಮ್ಮ ಕೆಲಸಗಳ ಮೂಲಕ ಸಾಕ್ಷಿಗುಡ್ಡೆ ನಿರ್ಮಿಸಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT