ಸಚಿವ ಎಂ.ಬಿ.ಪಾಟೀಲ್. 
ರಾಜ್ಯ

ನ್ಯಾಯಾಲಯದಲ್ಲಿ ಕೆಐಎಡಿಬಿ ಪ್ರಕರಣ: ಜುಲೈ 17ರ ಒಳಗೆ ಅಂತಿಮ ವರದಿ ಸಲ್ಲಿಕೆಗೆ ಸೂಚನೆ

ಕೆಐಎಡಿಬಿ ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿದ ಅಂಕಿ-ಸಂಖ್ಯೆ ಇತ್ಯಾದಿಗಳ ಬಗ್ಗೆ  ಜುಲೈ 17ರ ವೇಳೆಗೆ ಸಮಗ್ರ ವರದಿ ಸಲ್ಲಿಸಲು ಸಚಿವ ಎಂಬಿ ಪಾಟೀಲ್ ಸೂಚನೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕ ಪ್ರದೇಶ ಕೈಗಾರಿಕಾಭಿವೃದ್ಧಿ ಮಂಡಲಿ (ಕೆಐಎಡಿಬಿ) ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿದ ಕೋರ್ಟ್ ಪ್ರಕರಣಗಳ ಅಂಕಿಸಂಖ್ಯೆ, ಅವುಗಳ ಸ್ಥಿತಿಗತಿ, ಸ್ವಾಧೀನ ಪ್ರಕ್ರಿಯೆಯಲ್ಲಿ ಆಗಿರುವ ಲೋಪಗಳು ಇತ್ಯಾದಿಗಳ ಬಗ್ಗೆ ತಮಗೆ ಜುಲೈ 17ರ ವೇಳೆಗೆ ಸಮಗ್ರ ವರದಿ ಸಲ್ಲಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಅವರು ಮಂಗಳವಾರ ಇಲ್ಲಿ ಸುದೀರ್ಘ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಕೆಐಎಡಿಬಿ ನಿವೇಶನ ಹಂಚಿಕೆ ಸಂಬಂಧ ಕಳೆದ 4-5 ವರ್ಷಗಳಲ್ಲಿ 1,748 ಮೊಕದ್ದಮೆಗಳು ದಾಖಲಾಗಿವೆ. ಈ ಪೈಕಿ 921 ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, 762 ಪ್ರಕರಣಗಳಲ್ಲಿ ಸರಕಾರದ ಪರ ಆದೇಶ ಬಂದಿದೆ. ಆದರೆ, ಸರಕಾರದ ಹಿತಾಸಕ್ತಿ ಇರುವ ಕೆಲವು ಪ್ರಕರಣಗಳಲ್ಲಿ ನಾವು ಮೇಲ್ಮನವಿಯನ್ನೇ ಸಲ್ಲಿಸಿಲ್ಲ. 

ಇನ್ನು ಮುಂದೆ ಇಂತಹ ಪ್ರಕರಣಗಳಲ್ಲಿ ಎಲ್ಲವನ್ನೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆಯ ಗಮನಕ್ಕೆ ತಂದು, ಸಲಹೆ ಪಡೆಯಬೇಕು. ಜೊತೆಗೆ ಅಡ್ವೊಕೇಟ್‌ ಜನರಲ್ ಅವರ ಅಭಿಪ್ರಾಯವನ್ನೂ ಕೇಳಬೇಕು" ಎಂದರು. ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 10 ವರ್ಷಗಳ ಹಿಂದೆಯೇ 92 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದ್ದರೂ ಅಂತಿಮ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಇದು ಈಗ ಕಗ್ಗಂಟಾಗಿದೆ. ಇದರಲ್ಲಿ ಕೆಲವರು ಅಧಿಸೂಚನೆಯ ಪರವಾಗಿದ್ದರೆ, ಕೆಲವರು ವಿರೋಧಿಸುತ್ತಿದ್ದಾರೆ. ಇದನ್ನು ಸಮಗ್ರವಾಗಿ ಪರಿಶೀಲಿಸಿ, ಸೂಕ್ತ ರೀತಿಯಲ್ಲಿ ಬಗೆಹರಿಸಬೇಕು. 

ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಸರಿಯಾದ ವಿಧಿವಿಧಾನ ಅನುಸರಿಸದೆ ಇರುವುದೇ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಲು ಕಾರಣವಾಗಿವೆ" ಎಂದು ಅವರು ನಿರ್ದೇಶಿಸಿದರು. ಕೈಗಾರಿಕೆಗಳ ಬಳಕೆಗೆಂದು ಸರಕಾರದ ಬಳಿ ಈಗ 11 ಸಾವಿರ ಎಕರೆ ಭೂಮಿ ಇದ್ದು, ಇದರ ಮೌಲ್ಯ 8ರಿಂದ 10 ಸಾವಿರ ಕೋಟಿ ರೂ. ಆಗುತ್ತದೆ. ರಾಜ್ಯದಲ್ಲಿ ಎಲ್ಲೆಂದರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಮಾಡುವ ಬದಲು ಬೇಡಿಕೆ ಆಧರಿಸಿ ಮಾಡಬೇಕು. ಇದರಲ್ಲಿ ರಾಜಕೀಯ ಒತ್ತಡಕ್ಕೆ ಮಣಿಯಬಾರದು. ಜತೆಗೆ ಒಂದು ನಿರ್ದಿಷ್ಟ ಮಾದರಿಯ ಉದ್ಯಮಗಳಿಗೆ ಮೀಸಲಿಟ್ಟಿರುವ ಜಾಗಗಳಲ್ಲಿ ಅಂತಹ ಉದ್ದಿಮೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬಾರದಿದ್ದರೆ, ಅಲ್ಲಿರುವ ಜಾಗವನ್ನು ಉಳಿದ ಉದ್ದಿಮೆಗಳಿಗೂ ಒದಗಿಸುವ ನೀತಿಯನ್ನು ಅಳವಡಿಸಿ ಕೊಳ್ಳಲಾಗುವುದು ಎಂದು ಅವರು ವಿವರಿಸಿದರು. 

ರಾಜ್ಯದಲ್ಲಿ ಅಗತ್ಯ ಆಧಾರಿತ ಉದ್ದಿಮೆಗಳನ್ನು ಪ್ರೋತ್ಸಾಹಿಸಬೇಕು. ಇಲ್ಲದೆ ಹೋದರೆ ಎಲ್ಲವೂ ಬರೀ ಭೂಸ್ವಾಧೀನದ ಹಂತದಲ್ಲೇ ನಿಂತು ಹೋಗುತ್ತದೆ. ನಮ್ಮಲ್ಲಿ ಕೈಗಾರಿಕಾ ಉದ್ದೇಶಕ್ಕೆಂದು ವಶಪಡಿಸಿಕೊಂಡಿರುವ ಜಮೀನು ದಶಕಗಳ ನಂತರವೂ ಹಾಗೆಯೇ ಉಳಿದುಕೊಂಡಿರುವುದಕ್ಕೆ ಇದೇ ಮೂಲಕಾರಣವಾಗಿದೆ ಎಂದು ಪಾಟೀಲ ಪ್ರತಿಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT