ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ಮನೆ ಮುಂದೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ಚಿರತೆ ದಾಳಿ

ಚಾಮರಾಜನಗರ ಜಿಲ್ಲೆಯಲ್ಲಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಚಿರತೆಯೊಂದು ಆರು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದೆ. ಹನೂರು ತಾಲೂಕಿನಲ್ಲಿ ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ ಸುಶೀಲಾ ಎಂಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಚಿರತೆಯೊಂದು ಆರು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದೆ.

ಹನೂರು ತಾಲೂಕಿನಲ್ಲಿ ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ ಸುಶೀಲಾ ಎಂಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಕಾಮಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಾಳಿಯಿಂದ ಸಂತ್ರಸ್ತ ಗ್ರಾಮ ಮತ್ತು ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ. ಚಿರತೆ ಬಾಲಕಿಯನ್ನು ಮನೆಯಿಂದ 200 ಮೀಟರ್ ದೂರದವರೆಗೆ ಎಳೆದೊಯ್ದು, ಕಾಡಿಗೆ ಎಳೆದೊಯ್ಯಲು ಯತ್ನಿಸಿದೆ.

ಈಕೆಯ ಕಿರುಚಾಟ ಕೇಳಿದ ಬಾಲಕಿಯ ಪೋಷಕರು ಹಾಗೂ ಗ್ರಾಮಸ್ಥರು ಲಾಠಿ ಬೀಸಿ ಚಿರತೆಯನ್ನು ಓಡಿಸಿದ್ದಾರೆ.

ಅರಣ್ಯಾಧಿಕಾರಿಗಳು, ಆಕೆಯ ಶಿಕ್ಷಕರು ಮತ್ತು ಸ್ನೇಹಿತರು ಎಲ್ಲರೂ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯನ್ನು ವಿಚಾರಿಸಿದ್ದಾರೆ.

ಅರಣ್ಯದ ಸಮೀಪದಲ್ಲಿರುವ ಈ ಜಾಗದಲ್ಲಿ ಸೋಲಿಗ ಬುಡಕಟ್ಟು ಸಮುದಾಯದ ಜನರು ವಾಸವಿದ್ದು, ಚಿರತೆ ಹಾವಳಿ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಮುಖಂಡರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್