ಅರುಣ್ ಅವಧಾನಿ 
ರಾಜ್ಯ

ಬೆಂಗಳೂರು: ಖ್ಯಾತ ವಕೀಲ ಸಿ.ವಿ.ನಾಗೇಶ್ ಪುತ್ರ ಅರುಣ್ ಅವಧಾನಿ ಹೃದಯಾಘಾತದಿಂದ ನಿಧನ

ಹೈಕೋರ್ಟ್‌ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರ ಪುತ್ರ ಅರುಣ್ ಅವಧಾನಿ (41) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರುಣ್ ಅವಧಾನಿ ಪತ್ನಿ, ಪುತ್ರ ಸೇರಿ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

ಬೆಂಗಳೂರು: ಹೈಕೋರ್ಟ್‌ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರ ಪುತ್ರ ಅರುಣ್ ಅವಧಾನಿ (41) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರುಣ್ ಅವಧಾನಿ ಪತ್ನಿ, ಪುತ್ರ ಸೇರಿ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

ಭಾನುವಾರ ಊಟಿಯಲ್ಲಿ ತಂಗಿದ್ದ ಇವರು ತಡರಾತ್ರಿ ವಾಂತಿ-ತಲೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅರುಣ್ ಅವಧಾನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನುಅವರ ಪಾರ್ಥಿವ ಶರೀರವನ್ನು ಊಟಿಯಿಂದ ಬೆಂಗಳೂರಿಗೆ ತರಲಾಗಿದೆ.

‘ಅರುಣ್ ಅವರಿಗೆ ಇಬ್ಬರು ಸಹೋದರಿಯರಿದ್ದು ಒಬ್ಬರು ಅಮೆರಿಕ ಮತ್ತೊಬ್ಬರು ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಅಂತ್ಯಕ್ರಿಯೆ ನಾಳೆ (ಮಂಗಳವಾರ) ಸಂಜೆ ಅಥವಾ ನಾಡಿದ್ದು (ಬುಧವಾರ) ನಡೆಯಲಿದೆ. ಅಲ್ಲಿಯವರೆಗೂ ಪಾರ್ಥಿವ ಶರೀರವನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಇರಿಸಲಾಗುವುದು‘ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ