ಪ್ರಾತಿನಿಧಿಕ ಚಿತ್ರ 
ರಾಜ್ಯ

ಕರ್ನಾಟಕದ ಅರ್ಧಕ್ಕಿಂತ ಹೆಚ್ಚು ಜಿಲ್ಲೆಗಳಲ್ಲಿ ನೀರಿನ ಬಿಕ್ಕಟ್ಟು; ತುರ್ತು ಯೋಜನೆ ರೂಪಿಸಲು ಸರ್ಕಾರ ಸೂಚನೆ

ಕರ್ನಾಟಕದ ಅರ್ಥಕ್ಕಿಂತ ಹೆಚ್ಚು ಕನಿಷ್ಠ ಹದಿನಾರು ಜಿಲ್ಲೆಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದೆ. ಈ ಸಂಬಂಧ ತುರ್ತು ಯೋಜನೆ ಸಿದ್ಧಪಡಿಸಲು ಮತ್ತು ಮತ್ತು 'ಬರದಂತಹ' ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಬೆಂಗಳೂರು: ಕರ್ನಾಟಕದ ಅರ್ಥಕ್ಕಿಂತ ಹೆಚ್ಚು ಕನಿಷ್ಠ ಹದಿನಾರು ಜಿಲ್ಲೆಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದೆ. ಈ ಸಂಬಂಧ ತುರ್ತು ಯೋಜನೆ ಸಿದ್ಧಪಡಿಸಲು ಮತ್ತು ಮತ್ತು 'ಬರದಂತಹ' ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ರಾಜ್ಯಾದ್ಯಂತ ಮಳೆ ಕೊರತೆಯು ಕುಡಿಯುವ ನೀರಿನ ಕೊರತೆಗೆ ಕಾರಣವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.

ನೀರಿನ ಸಮಸ್ಯೆ ಇರುವ 16 ಜಿಲ್ಲೆಗಳ ಪೈಕಿ ಐದು ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಕಳೆದ ದಶಕದಲ್ಲಿ ಅಂತರ್ಜಲ ಮಟ್ಟದಲ್ಲಿ ದೊಡ್ಡ ಕುಸಿತ ಕಂಡಿದೆ.

ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಿಯಾಂಕ್ ಖರ್ಗೆ, ಕುಡಿಯುವ ನೀರು, ಸ್ಥಳೀಯ ಜಲಸಂಪನ್ಮೂಲಗಳನ್ನು ರಕ್ಷಿಸಲು ಮತ್ತು ಕೆಲವು ಜಿಲ್ಲೆಗಳಲ್ಲಿ 'ಸಂಭವನೀಯ ಬರಗಾಲದಂತಹ ಪರಿಸ್ಥಿತಿ'ಯನ್ನು ಎದುರಿಸಲು ಕಂದಾಯ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಲು ಎರಡು ತಿಂಗಳ ತುರ್ತು ಯೋಜನೆ ಸಿದ್ಧಪಡಿಸುವಂತೆ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಿಯಾಂಕ್ ಖರ್ಗೆ ಮಾತನಾಡಿ, 99 ತಾಲ್ಲೂಕುಗಳ 501 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಆದರೆ, ಉತ್ತರ ಕನ್ನಡದಲ್ಲಿ ಸುಧಾರಣೆ ಕಂಡುಬಂದಿದೆ. ಉದಾಹರಣೆಗೆ, ಕಳೆದ ಎರಡು ದಿನಗಳಿಂದ ತುಂತುರು ಮಳೆಯಾಗಿದೆ ಎಂದು ಅವರು ಹೇಳಿದರು.

ಪ್ರಿಯಾಂಕ್ ಅವರ ಪರಿಶೀಲನಾ ಸಭೆಯಲ್ಲಿ ಮಂಡಿಸಿದ ಮಾಹಿತಿಯ ಪ್ರಕಾರ, ಕರ್ನಾಟಕದ ಉತ್ತರ ಒಳನಾಡಿನ, ಮಲೆನಾಡು ಮತ್ತು ಕರಾವಳಿ ಪ್ರದೇಶಗಳು ಈ ತಿಂಗಳು ಶೇ 68-80 ರಷ್ಟು ಮಳೆ ಕೊರತೆಯನ್ನು ಎದುರಿಸುತ್ತಿವೆ. ಒಟ್ಟು 27 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ ಎಂದರು.

24 ಜಿಲ್ಲೆಗಳಲ್ಲಿ 424 ಗ್ರಾಮಗಳಿದ್ದು, ಇಲ್ಲಿ ಕುಡಿಯುವ ನೀರು ಪೂರೈಸಲು 365 ಟ್ಯಾಂಕರ್‌ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, 357 ಗ್ರಾಮಗಳಲ್ಲಿ 431 ಖಾಸಗಿ ಬೋರ್‌ವೆಲ್‌ ಮೂಲಕ ನೀರು ಪೂರೈಸಲಾಗುತ್ತಿದೆ.

ಸಚಿವರ ಕಚೇರಿಯ ಹೇಳಿಕೆಯ ಪ್ರಕಾರ, ರಾಜ್ಯವು ಕಳೆದ 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅತ್ಯಂತ ಕೆಟ್ಟ ಮಳೆ ಕೊರತೆಯನ್ನು ಎದುರಿಸುತ್ತಿದೆ. ಆದಾಗ್ಯೂ, ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿರುವುದರಿಂದ ದಿನದಿಂದ ದಿನಕ್ಕೆ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT