ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಹೆಚ್ಚಳ: ಕರ್ನಾಟಕ ಎಎಪಿಯಿಂದ 'ರೋಡ್ ಟು ಡೆತ್' ಅಭಿಯಾನ

ಯೋಜನೆಯ ಅವೈಜ್ಞಾನಿಕ ಅನುಷ್ಠಾನದಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳು ಮತ್ತು ಸಾವುಗಳನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಕರ್ನಾಟಕ ಘಟಕವು ‘ರೋಡ್ ಟು ಡೆತ್’ ಎಂಬ ಅಭಿಯಾನವನ್ನು ಕೈಗೆತ್ತಿಕೊಂಡಿದೆ.

ಬೆಂಗಳೂರು: ಯೋಜನೆಯ ಅವೈಜ್ಞಾನಿಕ ಅನುಷ್ಠಾನದಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳು ಮತ್ತು ಸಾವುಗಳನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಕರ್ನಾಟಕ ಘಟಕವು ‘ರೋಡ್ ಟು ಡೆತ್’ ಎಂಬ ಅಭಿಯಾನವನ್ನು ಕೈಗೆತ್ತಿಕೊಂಡಿದೆ.

ಕಳೆದ 9 ತಿಂಗಳಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 158 ಜನರು ಸಾವಿಗೀಡಾಗಿದ್ದಾರೆ. ಸರ್ಕಾರಗಳ ಅವೈಜ್ಞಾನಿಕ ಮತ್ತು ಭ್ರಷ್ಟ ಯೋಜನೆಗಳಿಗೆ ಅಮಾಯಕರು ಬಲಿಯಾಗುತ್ತಿರುವುದು ದುರಂತ ಎಂದು ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಹೇಳಿದ್ದಾರೆ. 

ಸರ್ಕಾರಗಳ ತಪ್ಪು ಕ್ರಮಗಳಿಂದ ಅಮಾಯಕರು ಸಾವಿಗೀಡಾಗುತ್ತಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷವು ‘ರೋಡ್ ಟು ಡೆತ್’ ಅಭಿಯಾನವನ್ನು ಕೈಗೆತ್ತಿಕೊಂಡಿದೆ ಎಂದರು.

ಈ ಅಭಿಯಾನದ ಮೂಲಕ ಅಮಾಯಕ ಪ್ರಯಾಣಿಕರ ಜೀವ ಉಳಿಸಲು ಜನಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ. ಶುಕ್ರವಾರ (ಜೂನ್ 30) ಮೈಸೂರು ರಸ್ತೆಯ ಕಣಿಮಾನಿಕೆ ಟೋಲ್ ಪ್ಲಾಜಾ ಬಳಿ ಪಕ್ಷದ ನೂರಾರು ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದು ಮೋಹನ್ ದಾಸರಿ ತಿಳಿಸಿದರು.

ಇಂತಹ ಅಭಿಯಾನಗಳ ಮೂಲಕ ಅಮಾಯಕ ಪ್ರಯಾಣಿಕರ ಜೀವ ಉಳಿಸುವುದು ಆಮ್ ಆದ್ಮಿ ಪಕ್ಷದ ಉದ್ದೇಶವಾಗಿದ್ದು, ಸಾರ್ವಜನಿಕರು ನಮ್ಮೊಂದಿಗೆ ಕೈಜೋಡಿಸುವಂತೆ ಮನವಿ ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT