ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ: ತಲೆಮರೆಸಿಕೊಂಡಿರುವ ಮೂವರು ಶಂಕಿತರ ಬೆಂಗಳೂರಿನ ನಿವಾಸದಲ್ಲಿ ಎನ್ಐಎ ಶೋಧ

Sumana Upadhyaya

ಬೆಂಗಳೂರು/ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ (NIA) ಅಧಿಕಾರಿಗಳು ಶೋಧ ಮುಂದವರಿಸಿದ್ದಾರೆ.

ನಿನ್ನೆ ಏಕಕಾಲಕ್ಕೆ 6 ಕಡೆಗಳಲ್ಲಿ ದಾಳಿ ನಡೆಸಿರುವ ಎನ್​ಐಎ ಅಧಿಕಾರಿಗಳು, ಎಲೆಕ್ಟ್ರಾನಿಕ್ ಡಿವೈಸ್​​ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದರು. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.

ಅದರ ಜೊತೆಗೆ ಎನ್ಐಎ ಅಧಿಕಾರಿಗಳು ತಲೆಮರೆಸಿಕೊಂಡಿರುವ ಮೂವರು ಶಂಕಿತರ ನಿವಾಸಗಳ ಮೇಲೆ ಬೆಂಗಳೂರಿನಲ್ಲಿ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಮೂವರು ಶಂಕಿತರು ಪ್ರವೀಣ್ ನೆಟ್ಟಾರು ಹತ್ಯೆ ಕೇಸಿನ ಮುಖ್ಯ ಆರೋಪಿಗೆ ಕರ್ನಾಟಕ ಮತ್ತು ತಮಿಳು ನಾಡಿನಲ್ಲಿ ವಿವಿಧ ಅಡಗುತಾಣಗಳಲ್ಲಿ ಮಾಹಿತಿ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ಮೂವರು ಮಾತ್ರವಲ್ಲದೆ ಇನ್ನುಳಿದ ಐವರು ಕಳೆದ ವರ್ಷ ಆಗಸ್ಟ್ ನಿಂದ ಇನ್ನೂ ತಲೆಮರೆಸಿಕೊಂಡಿದ್ದಾರೆ.

ತಲೆಮರೆಸಿಕೊಂಡವರು ಸೇರಿದಂತೆ ಒಟ್ಟು 21 ಮಂದಿ ವಿರುದ್ಧ ಎನ್ಐಎ ಯುಎ(ಪಿ) ಕಾಯ್ದೆ, ಐಪಿಸಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಇದುವರೆಗೆ ಚಾರ್ಚ್ ಶೀಟ್ ಸಲ್ಲಿಸಿದೆ. 

ಪ್ರವೀಣ್ ನೆಟ್ಟಾರು ಹತ್ಯೆ: ಪ್ರವೀಣ್ ನೆಟ್ಟಾರುನನ್ನು ಜುಲೈ 26, 2022ರಂದು ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪಿಎಫ್ಐಯ 'ಕಿಲ್ಲರ್ ಸ್ಕ್ವಾಡ್' ಅಥವಾ 'ಸೇವಾ ತಂಡಗಳು' ಹತ್ಯೆಗೈದಿತ್ತು. 

SCROLL FOR NEXT