ಅಶೋಕ್ ಮಣ್ಣಿಕೇರಿ 
ರಾಜ್ಯ

ಬೆಳಗಾವಿ: ತಹಶೀಲ್ದಾರ್ ಅಶೋಕ್ ಮಣ್ಣಿಕೇರಿ ಅನುಮಾನಾಸ್ಪದ ಸಾವು!

ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್​ ಮೊದಲ ಬಾರಿಗೆ ಶಾಸಕರಾಗಿದ್ದಾಗ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ‌ಅಶೋಕ್ ಮಣ್ಣಿಕೇರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಬೆಳಗಾವಿ: ಬೆಳಗಾವಿ ಎಸಿ ಕಚೇರಿಯ ಗ್ರೇಡ್- 2 ತಹಶೀಲ್ದಾರ್ ಹಠಾತ್ ಮೃತಪಟ್ಟಿದ್ದಾರೆ. ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್​ ಮೊದಲ ಬಾರಿಗೆ ಶಾಸಕರಾಗಿದ್ದಾಗ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ‌ಅಶೋಕ್ ಮಣ್ಣಿಕೇರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಇವರ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ ಮತ್ತು ಆಕೆಯ ಸಹೋದರ ಸ್ಯಾಮ್ಯುಯೆಲ್ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದೆ. ಮೃತ ಅಶೋಕ್​ ಕುಟುಂಬಸ್ಥರು ಈ ಬಗ್ಗೆ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಅಶೋಕ್ ಮಣ್ಣಿಕೇರಿ ಕುಟುಂಬ ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿತ್ತು, ತಡರಾತ್ರಿ ಹೃದಯಾಘಾತವಾಗಿದೆ ಎಂದು ಅಶೋಕ್ ಮಣ್ಣಿಕೇರಿ ಅವರನ್ನು ಪತ್ನಿ ಭೂಮಿ ಹಾಗೂ ಆಕೆಯ ಸಹೋದರ ಸ್ಯಾಮ್ಯುಯೆಲ್ ಅವರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದ್ರೆ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅಶೋಕ್ ಮಣ್ಣಿಕೇರಿ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಸೂಕ್ತ ತನಿಖೆಗೆ ನಡೆಸುವಂತೆ ಅಶೋಕ್ ಮಣ್ಣಿಕೇರಿ ಕುಟುಂಬಸ್ಥರು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇನ್ನು ಭೂಮಿ ಹಾಗೂ ಆಕೆಯ ಸಹೋದರ ಸ್ಯಾಮ್ಯುಯೆಲ್ ಮೇಲೆ ಮೃತ ಅಶೋಕ್ ಕುಟುಂಬಸ್ಥರು ಹಲ್ಲೆಗೆ ಯತ್ನಿಸಿದ್ದಾರೆ. ಆ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಇಬ್ಬರನ್ನು ಕರೆದುಕೊಂಡು ಹೋಗಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಳೆದ ಬಾರಿ ಶಾಸಕಿಯಾಗಿದ್ದ ವೇಳೆ ಮೃತ ಅಶೋಕ್ ಮಣ್ಣಿಕೇರಿ ಅವರು ಆಪ್ತ ಸಹಾಯಕನಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಬೆಳಗಾವಿ ಎಸಿ ಕಚೇರಿಯಲ್ಲಿ ಗ್ರೇಡ್ 2 ತಹಶಿಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಜನಾನುರಾಗಿ ಅಧಿಕಾರಿ ಎಂದೇ ಹೆಸರುವಾಸಿಯಾಗಿದ್ದ ಅಶೋಕ್ ಮಣ್ಣಿಕೇರಿ ಇದೀಗ ಹಠಾತ್ ಸಾವಿನ ಸುದ್ದಿ ಎಲ್ಲರಿಗೂ ಆಘಾತ ಉಂಟು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ