ರಾಜ್ಯ

ಗೋಹತ್ಯೆ ನಿಷೇಧ ಕಾನೂನು ರದ್ದುಗೊಳಿಸುವ ನಡೆ; ರೈತ ಸಂಘಗಳ ವಿರೋಧ

Sumana Upadhyaya

ಬೆಂಗಳೂರು: ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯನ್ನು(anti-cow slaughter law) ರದ್ದುಗೊಳಿಸುವ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ರೈತ ಸಂಘಗಳ ಸದಸ್ಯರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. 

ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ಇತ್ತೀಚೆಗೆ ಎಮ್ಮೆಗಳನ್ನು ಕೊಲ್ಲಬಹುದಾದರೆ ಹಸುಗಳನ್ನು ಏಕೆ ಕೊಲ್ಲಬಾರದು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರೈತ ಸಂಘದ ಸದಸ್ಯರು, ರೈತರಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತ ಚರ್ಚೆಯಲ್ಲಿ, ಗೋಹತ್ಯೆ ನಿಷೇಧ ವಿಚಾರವನ್ನು ರಾಜಕೀಯಗೊಳಿಸುವ ಬದಲು, ಕಾನೂನಿನಲ್ಲಿರುವ ಎಲ್ಲ ಅಂಶಗಳ ಬಗ್ಗೆ ಸಮಗ್ರ ಚರ್ಚೆ ಮತ್ತು ಲೋಪದೋಷಗಳಿದ್ದರೆ ಸರಿಪಡಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.

ವಿವಿಧ ಸಮಸ್ಯೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಲು ಕರ್ನಾಟಕದ ಆರು ಸ್ಥಳಗಳಲ್ಲಿ ವಿಭಾಗೀಯ ಮಟ್ಟದ ರೈತರ ಸಭೆಗಳನ್ನು ನಡೆಸಲು ನಿರ್ಧರಿಸಿದ್ದಾರೆ. ಅನ್ನ ಭಾಗ್ಯ ಯೋಜನೆಗಾಗಿ ರೈತರಿಂದ ನೇರವಾಗಿ ಅಕ್ಕಿ, ರಾಗಿ, ಜೋಳವನ್ನು ಖರೀದಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

SCROLL FOR NEXT