ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 10 ದಿನ ಭಾರೀ ಮಳೆ ಮುನ್ಸೂಚನೆ: ಎನ್ ಡಿ‌ ಆರ್ ‌ಎಫ್ ಸಿಬ್ಬಂದಿ ನಿಯೋಜನೆ

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 10 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ.

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 10 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ. ಈ ಅವಧಿಯಲ್ಲಿ ಅಲಲ್ಲಿ ಅತಿ ಹೆಚ್ಚು 244.4  ಮಿಲಿ ಮೀಟರ್ ಮಳೆಯೊಂದಿಗೆ ಕರಾವಳಿ ಜಿಲ್ಲೆಯಲ್ಲಿ 64 ಮಿ.ಮೀ ನಿಂದ 115 ಮಿ. ಮೀ.  ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. 

ರಾಜ್ಯದ ಕರಾವಳಿ ಎಲ್ಲಾ ಜಿಲ್ಲೆಗಳ ಅಲ್ಲಲ್ಲಿ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯು ಹೆಚ್ಚಿನ ಉಬ್ಬರವಿಳಿತದೊಂದಿಗೆ ಹೊಂದಿಕೆಯಾಗಬಹುದು, ಇದರ ಪರಿಣಾಮವಾಗಿ ತಗ್ಗು ಪ್ರದೇಶಗಳು ಜಲಾವೃತ ಮತ್ತು ಪ್ರವಾಹಕ್ಕೆ ಕಾರಣವಾಗಬಹುದು. ಅಗತ್ಯ ಪರಿಸ್ಥಿತಿಯನ್ನು ನಿಭಾಯಿಸಲು ಅಂತಹ ಪ್ರದೇಶಗಳಲ್ಲಿ ಮುಂಚಿತವಾಗಿ ಡಿ-ವಾಟರಿಂಗ್ ಪಂಪ್‌ಗಳು ಮತ್ತು ಇತರ ಉಪಕರಣಗಳನ್ನು ನಿಯೋಜಿಸಲು ಜಿಲ್ಲಾಡಳಿತಗಳಿಗೆ ತಿಳಿಸಲಾಗಿದೆ.

ಯಾವುದೇ ಅನಾಹುತ ತಡೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ಡಿಆರ್‌ಎಫ್ ಸಿಬ್ಬಂದಿಯನ್ನು ದುರ್ಬಲ ಪ್ರದೇಶಗಳಲ್ಲಿ ನಿಯೋಜಿಸಲು ಸಂಬಂಧಿಸಿದ ಆಡಳಿತಕ್ಕೆ ಸೂಚಿಸಲಾಗಿದೆ.  ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕರಾವಳಿಯಲ್ಲಿ  ಜುಲೈ 2 ರವರೆಗೆ ಗಂಟೆಗೆ 45-55  ಕಿಮೀ ವೇಗದಲ್ಲ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia CUP2025: 'ಸೂಪರ್ ಓವರ್' ಪಂದ್ಯದಲ್ಲಿ ಲಂಕಾ ಮಣಿಸಿದ ಭಾರತ! ಫೈನಲ್ ಗೆ ಲಗ್ಗೆ

ಮಂಡ್ಯ: ಕೆಆರ್ ಎಸ್ ಬಳಿ 'ಕಾವೇರಿ ಆರತಿ' ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ!

Israel 'must finish the job: ವಿಶ್ವಸಂಸ್ಥೆಯಲ್ಲಿ ನೆತನ್ಯಾಹು 'ಉದ್ಧಟತನದ ಭಾಷಣ'; ಅನೇಕ ರಾಷ್ಟ್ರಗಳ ಪ್ರತಿನಿಧಿಗಳು walk out!

Rahul-Priyanka Bond: ರಾಹುಲ್- ಪ್ರಿಯಾಂಕಾ ಬಾಂಧವ್ಯದ ಬಗ್ಗೆ ಬಿಜೆಪಿಯ ಕೈಲಾಶ್ ವರ್ಗಿಯಾ ವಿವಾದಾತ್ಮಕ ಹೇಳಿಕೆ!

ಸಿನಿಮಾ ಟಿಕೆಟ್, ಟಿವಿ ಚಾನಲ್ ಗಳ ಮೇಲೆ ಶೇ.2 ರಷ್ಟು ಸೆಸ್ ವಿಧಿಸಲು ರಾಜ್ಯ ಸರ್ಕಾರ ಮುಂದು: ಇದರ ಪರಿಣಾಮ ಏನು...?

SCROLL FOR NEXT