ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು

ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಶಿಕ್ಷಕನ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿದೆ. ಮಲ್ಲಾರಾಧ್ಯ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಿ.

ತುಮಕೂರು: ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಶಿಕ್ಷಕನ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿದೆ. ಮಲ್ಲಾರಾಧ್ಯ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಿ. ಈತ ಪ್ರಸಿದ್ಧ ಧಾರ್ಮಿಕ ಮಠವೊಂದು ನಡೆಸುತ್ತಿರುವ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಂಬಂಧ  ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 354 (ಎ) ಮತ್ತು 506 ರ ಅಡಿಯಲ್ಲಿ ಕ್ಯಾತಸಂದ್ರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂತ್ರಸ್ತೆಯ ಮಗ ವಸತಿ ಹಾಸ್ಟೆಲ್ ಮತ್ತು ಶಾಲೆಯಲ್ಲಿ ಓದುತ್ತಿದ್ದಾನೆ. ಲೆಡ್ಜರ್‌ನಿಂದ ಸಂತ್ರಸ್ತೆಯ ಮೊಬೈಲ್ ನಂಬರ್ ಪಡೆದ ಆರೋಪಿ ಆಕೆಯೊಂದಿಗೆ ಸಂಭಾಷಣೆ ಪ್ರಾರಂಭಿಸಿದ್ದಾನೆ. ಆರಂಭದಲ್ಲಿ ವಿದ್ಯಾರ್ಥಿಯ ಪ್ರಗತಿಯ ಬಗ್ಗೆ ಚರ್ಚಿಸುತ್ತಿದ್ದ ಅವರು ನಿಧಾನವಾಗಿ ಅಶ್ಲೀಲ ಸಂದೇಶಗಳನ್ನು ಕಳುಹಿಸಲು ಆರಂಭಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕ ತನಗೆ ಅಶ್ಲೀಲ ಮತ್ತು ಅಸಭ್ಯ ಸಂದೇಶಗಳನ್ನು ಕಳುಹಿಸಿದ್ದಾರೆ ಮತ್ತು ಸಹಕರಿಸದಿದ್ದರೆ ತನ್ನ ಮಗನನ್ನು ಫೇಲ್ ಮಾಡಿ, ಆತನ ಬದುಕನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ನಂತರ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಕುರಿತು ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!