ಅಪಘಾತದ ದೃಶ್ಯ 
ರಾಜ್ಯ

ವಿಜಯಪುರ: ಲಾರಿ-ಆಟೋಗಳ ನಡುವೆ ಭೀಕರ ಅಪಘಾತ; 7 ಮಂದಿ ದುರ್ಮರಣ

ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಹೊಸಪೇಟೆ: ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 

ಅಪಘಾತದಲ್ಲಿ ವೇಗವಾಗಿ ಬಂದ ಲಾರಿ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ ಐವರು ಮಹಿಳೆಯರು ಇಬ್ಬರು ಪುರುಷರು ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಆಟೋಗಳಲ್ಲಿ 19 ಮಂದಿ ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತ ಬಳಿಕ ಲಾರಿಯನ್ನು ಬಿಟ್ಟು ಲಾರಿ ಚಾಲಕ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!