ಸಂಗ್ರಹ ಚಿತ್ರ 
ರಾಜ್ಯ

ಜುಲೈ 2ರ ಭಾನುವಾರ ಬೆಳಗ್ಗೆ ಎರಡು ಗಂಟೆ ಕಾಲ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತ

ನೇರಳೆ ಮಾರ್ಗದಲ್ಲಿ ಜುಲೈ 2ರ  ಭಾನುವಾರ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಎರಡು ಗಂಟೆ ಸ್ಥಗಿತವಾಗಲಿದೆ.

ಬೆಂಗಳೂರು: ನೇರಳೆ ಮಾರ್ಗದಲ್ಲಿ ಜುಲೈ 2ರ  ಭಾನುವಾರ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಎರಡು ಗಂಟೆ ಸ್ಥಗಿತವಾಗಲಿದೆ.

ಟ್ರಿನಿಟಿ-ಎಂ.ಜಿ ರಸ್ತೆ ಮೆಟ್ರೋ ನಡುವೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಭಾನುವಾರ ಎರಡು ಗಂಟೆಗಳ ಕಾಲ  ನಮ್ಮ ಮೆಟ್ರೋ ಸಂಚರಿಸುವುದಿಲ್ಲ. ಈ ಬಗ್ಗೆ ಇಂದು( ಜೂನ್ 30) ಬಿಎಂಆರ್​ಸಿಎಲ್ ಪ್ರಕಟಣೆ ಮೂಲಕ ಮಾಹಿತಿ ನಿಡಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮವು ಜುಲೈ 2 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆ (ಎರಡು ಗಂಟೆ ಮಾತ್ರ) ಮೆಟ್ರೋ ಸಂಚಾರ ಇರುವುದಿಲ್ಲ.

ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ನಮ್ಮ ಮೆಟ್ರೋ ವಿಷಾದಿಸಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಗೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್