ಸಾಂದರ್ಭಿಕ ಚಿತ್ರ 
ರಾಜ್ಯ

ಸ್ನೇಹಿತರ ಜೊತೆ ಸೇರಿ ಲೈಂಗಿಕ ಕಿರುಕುಳ ನೀಡಿದ ಪತಿ ವಿರುದ್ಧ ದೂರು ದಾಖಲಿಸಿದ ಟೆಕ್ಕಿ!

ಸ್ನೇಹಿತರ ಜೊತೆ ಸೇರಿ ಲೈಂಗಿಕ ಕಿರುಕುಳ ನೀಡಿದ ಪತಿ ವಿರುದ್ಧ ಟೆಕ್ಕಿಯೊಬ್ಬರು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬೆಂಗಳೂರು: ಸ್ನೇಹಿತರ ಜೊತೆ ಸೇರಿ ಲೈಂಗಿಕ ಕಿರುಕುಳ ನೀಡಿದ ಪತಿ ವಿರುದ್ಧ ಟೆಕ್ಕಿಯೊಬ್ಬರು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಾದಕ ವ್ಯಸನಿಯಾಗಿದ್ದ ಪತಿ ಸ್ನೇಹಿತರೊಂದಿಗೆ ಸೇರಿ ತನ್ನ ಖಾಸಗಿ ವಿಡಿಯೋ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದು, ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಂಧ್ರಪ್ರದೇಶದ ಕಾಕಿನಾಡ ಮೂಲದ ಅಖಿಲೇಶ್ ಧರ್ಮರಾಜ್ ಆರೋಪಿ ಪತಿಯಾಗಿದ್ದಾನೆ. ಈ ದಂಪತಿಗಳು 2019 ರಲ್ಲಿ ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಭೇಟಿಯಾಗಿದ್ದು, ಆರಂಭದಲ್ಲಿ ಆರೋಪಿ ಉತ್ತಮ ನಡತೆ ಹೊಂದಿದ್ದರೂ ನಂತರ ಆತ ಮಾದಕ ವ್ಯಸನಿ ಎಂಬುದು ಸಂತ್ರಸ್ತೆಗೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗೆ ಮನೆಗೆ  ಗಾಂಜಾ ತಂದು ಆಕೆಯ ಮುಂದೆ ಧೂಮಪಾನ ಮಾಡಲು ಶುರು ಮಾಡಿದ್ದ. ಈ ಬಗ್ಗೆ ಪ್ರಶ್ನಿಸಿದಾಗ ಆಕೆಗೆ ಚಿತ್ರ ಹಿಂಸೆ ನೀಡಿ ಸ್ನೇಹಿತರನ್ನು ಮನೆಗೆ ಕರೆತಂದು ಮನೆಯಲ್ಲಿ ಗಾಂಜಾ ಪಾರ್ಟಿ ಶುರುವಿಟ್ಟುಕೊಂಡಿದ್ದ. ಆರೋಪಿಯ ಸ್ನೇಹಿತರು ಕೂಡ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ. 

ಲೈಂಗಿಕ ಕಿರುಕುಳ ತಾಳಲಾರದೆ ತನ್ನ ಪೋಷಕರ ನಿವಾಸಕ್ಕೆ ಟೆಕ್ಕಿ ತೆರಳಿದಾಗ ಅಲ್ಲಿಗೂ ತನ್ನ ಸ್ನೇಹಿತರೊಂದಿಗೆ ಹೋಗಿದ್ದ ಆರೋಪಿ, ಮನೆಗೆ ಬರುವಂತೆ, ಏನಾದರೂ ಬಹಿರಂಗಪಡಿಸಿದರೆ ಹತ್ಯೆ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದ. 
ಅಲ್ಲದೇ, ಮಲಗುವ ಕೋಣೆ ಮತ್ತು ಬಾತ್ ರೂಂನಲ್ಲಿ ಸಿಸಿಟಿವಿಗಳನ್ನು ಅಳವಡಿಸಿದ್ದನ್ನು ಪ್ರಶ್ನಿಸಿದಾಗ ಆಕೆಯ ಮೇಲೆ ಹಲ್ಲೆ ನಡೆಸಿದ್ದು, ಖಾಸಗಿ ವಿಡಿಯೋಗಳನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾಳೆ.

ಈ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಆದರೆ, ತನಿಖೆ ಕೈಗೆತ್ತಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT