ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆಗೆ ಸಚಿವಾಲಯದಲ್ಲಿ ಉದ್ಯೋಗ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಆ್ಯಸಿಡ್  ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆಯಾಗಿರುವ ಸಂತ್ರಸ್ತೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. 

ಬೆಂಗಳೂರು: ಆ್ಯಸಿಡ್  ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆಯಾಗಿರುವ ಸಂತ್ರಸ್ತೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ, ಸಂತ್ರಸ್ತೆ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 

2022ರ ಏಪ್ರಿಲ್ 28 ರಂದು ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು. 
 
ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾಮಿ ವೇಷದಲ್ಲಿದ್ದ ಆರೋಪಿಯನ್ನು ಬಂಧಿಸಿದ್ದ ಪೊಲೀಸರು: ಆ್ಯಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು, ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT