ರಾಜ್ಯ

ನಕಲಿ ನೋಟು: ಕರ್ನಾಟಕದ ವಿವಿಧ ಬ್ಯಾಂಕ್ ಮ್ಯಾನೇಜರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ ಆರ್‌ಬಿಐ

Ramyashree GN

ಬೆಂಗಳೂರು: ಬ್ಯಾಂಕುಗಳಿಗೆ ಜಮೆಯಾದ ಹಣದಲ್ಲಿ ನಕಲಿ ನೋಟುಗಳನ್ನು ಪತ್ತೆಹಚ್ಚಿದ ನಂತರ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಎಫ್‌ಐಆರ್ ದಾಖಲಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

100 ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ, ಮಣಿಪಾಲ, ಹುಬ್ಬಳ್ಳಿ ಬ್ಯಾಂಕ್ ಶಾಖೆಗಳು ಮತ್ತು ಬೆಂಗಳೂರಿನ ಮಲ್ಲೇಶ್ವರಂ ಶಾಖೆಯಲ್ಲಿ ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಬ್ಯಾಂಕ್‌ಗಳು ಆರ್‌ಬಿಐಗೆ ರವಾನೆ ಮಾಡಿದ ಹಣದಲ್ಲಿ ನಕಲಿ ಕರೆನ್ಸಿ ನೋಟುಗಳು ಪತ್ತೆಯಾಗಿವೆ.

ಈ ಸಂಬಂಧ ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಯುಬಿಐ ಬ್ಯಾಂಕ್ ಮ್ಯಾನೇಜರ್‌ಗಳ ವಿರುದ್ಧ ಆರ್‌ಬಿಐ ಮ್ಯಾನೇಜರ್ ಆನಂದ್ ದೂರು ದಾಖಲಿಸಿದ್ದರು.

ವಿಚಾರಣೆಗೆ ಹಾಜರಾಗುವಂತೆ ಬ್ಯಾಂಕ್‌ಗಳ ವ್ಯವಸ್ಥಾಪಕರಿಗೆ ನೋಟಿಸ್ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

SCROLL FOR NEXT