ಪ್ರಾತಿನಿಧಿಕ ಚಿತ್ರ 
ರಾಜ್ಯ

ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ: ಸಿದ್ದರಾಮಯ್ಯಗೆ ವಿದ್ಯಾರ್ಥಿ ಒಕ್ಕೂಟ ಪತ್ರ

ಬೆಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, 2019ರ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಅಳವಡಿಕೆಯಲ್ಲಿ 'ಏಕಸ್ವಾಮ್ಯ'ವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದೆ.

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, 2019ರ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಅಳವಡಿಕೆಯಲ್ಲಿ 'ಏಕಸ್ವಾಮ್ಯ'ವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದೆ.

ಗುರುವಾರ ಇಲ್ಲಿ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ವಿದ್ಯಾರ್ಥಿ ಹೋರಾಟಗಾರ ಮತ್ತು ಒಕ್ಕೂಟದ ಅಧ್ಯಕ್ಷ ಲೋಕೇಶ್ ರಾಮ್, 'ಹಳೆಯ ವಾಹನಗಳ ನಂಬರ್ ಪ್ಲೇಟ್‌ಗಳನ್ನು ಟ್ಯಾಂಪರ್ ಮಾಡುವುದು ಸುಲಭ, ಅವುಗಳನ್ನು ಕಳ್ಳತನ ಮತ್ತು ಅಪರಾಧಗಳಿಗೆ ದುರುಪಯೋಗಪಡಿಸಿಕೊಳ್ಳುವ ಹೆಚ್ಚಿನ ಸಾಧ್ಯತೆಗಳಿವೆ. ಇದಕ್ಕೆ ಕಡಿವಾಣ ಹಾಕಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಎಲ್ಲಾ ಹಳೆಯ ಮತ್ತು ಹೊಸ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ' ಎಂದರು.

'ಎಲ್ಲಾ ಹೊಸ ವಾಹನಗಳು ಇದನ್ನು ಹೊಂದಿದ್ದರೂ, 2019ರ ಮೊದಲು ನೋಂದಾಯಿಸಲಾದವುಗಳು ಎಚ್‌ಎಸ್‌ಆರ್‌ಪಿಯೊಂದಿಗೆ ಅಳವಡಿಸಿಕೊಳ್ಳಬೇಕು. ಕರ್ನಾಟಕವು 2019ರ ಮೊದಲು ಸುಮಾರು ಎರಡು ಕೋಟಿ ವಾಹನಗಳನ್ನು ನೋಂದಾಯಿಸಿದೆ ಮತ್ತು ಪರವಾನಗಿ ಪ್ಲೇಟ್ ತಯಾರಕರ ಎಂಪನೆಲ್‌ಮೆಂಟ್ ಮೂಲಕ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಜಾರಿಗೆ ತರುವ ರಾಜ್ಯ ಸರ್ಕಾರದ ಕ್ರಮವು ಏಕಸ್ವಾಮ್ಯ ಮತ್ತು ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ' ಎಂದಿದ್ದಾರೆ.

ಎಚ್‌ಎಸ್‌ಆರ್‌ಪಿ ಅಲ್ಯೂಮಿನಿಯಂ ವಾಹನ ನಂಬರ್ ಪ್ಲೇಟ್ ಆಗಿದ್ದು, ಮರುಬಳಕೆ ಮಾಡಲಾಗದ ಎರಡು ಸ್ನ್ಯಾಪ್-ಆನ್ ಲಾಕ್‌ಗಳನ್ನು ಮತ್ತು ಎಂಜಿನ್ ಸಂಖ್ಯೆ, ಚಾಸಿಸ್ ಸಂಖ್ಯೆಯಂತಹ ವಿವರಗಳನ್ನು ಕೇಂದ್ರೀಕೃತ ಡೇಟಾಬೇಸ್‌ನಲ್ಲಿ ಸಂಗ್ರಹಿಸಿ ವಾಹನಗಳಿಗೆ ಅಳವಡಿಸಲಾಗುತ್ತದೆ. ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಕೇವಲ ನಾಲ್ಕು ಕಂಪನಿಗಳಿಗೆ ಅನುಮತಿ ನೀಡಲು ರಾಜ್ಯ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ ಎಂದು ರಾಮ್ ಆರೋಪಿಸಿದರು.

'ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚು ಕುಟುಂಬಗಳು ನಂಬರ್‌ ಪ್ಲೇಟ್‌ ತಯಾರಿಸುವ ಉದ್ಯಮದಲ್ಲಿವೆ. ಕೆಲಸ ಮಾಡಲು ಕೇವಲ ನಾಲ್ಕು ಕಂಪನಿಗಳಿಗೆ ಏಕೆ ಅನುಮತಿ ನೀಡಬೇಕು? ಎಂದು ಅವರು ಪ್ರಶ್ನಿಸಿದರು. 

ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸುವ ಯಾವುದೇ ಪ್ರಸ್ತಾವನೆ ನನಗೆ ಇನ್ನೂ ಬಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT