ತೈವಾನ್-ಇಂಡಿಯಾ ಬಿಜಿನೆಸ್‌ ಅಸೋಸಿಯೇಷನ್‌ನ ಹೂಡಿಕೆದಾರರೊಂದಿಗೆ ಸಚಿವ ಎಂ ಬಿ ಪಾಟೀಲ್ 
ರಾಜ್ಯ

ಬಿಎಂಟಿಸಿ ಡೀಸೆಲ್ ಬಸ್‌ಗಳಿಗೆ ಇವಿ ರೂಪ ಕೊಡಲು ತೈವಾನ್ ಒಲವು: ಸಚಿವ ಎಂ.ಬಿ. ಪಾಟೀಲ್

ಬಿಎಂಟಿಸಿ ಡೀಸೆಲ್ ಬಸ್ಸುಗಳನ್ನು ವಿದ್ಯುತ್‌ ಚಾಲಿತ ವಾಹನಗಳನ್ನಾಗಿ ಪರಿವರ್ತಿಸಿ, ಮರುಬಳಕೆಗೆ ಅಣಿಗೊಳಿಸಲು ತೈವಾನ್‌ ಕಂಪನಿಗಳು ಆಸಕ್ತಿ ವ್ಯಕ್ತಪಡಿಸಿವೆ. ಇದರಿಂದ ಪರಿಸರಸ್ನೇಹಿ ಮತ್ತು ಸುಸ್ಥಿರ ಅಭಿವೃದ್ಧಿ ಸಾಧ್ಯವಾಗಲಿದ್ದು, ಈ ಸಂಬಂಧ...

ಬೆಂಗಳೂರು: ಬಿಎಂಟಿಸಿ ಡೀಸೆಲ್ ಬಸ್ಸುಗಳನ್ನು ವಿದ್ಯುತ್‌ ಚಾಲಿತ ವಾಹನಗಳನ್ನಾಗಿ ಪರಿವರ್ತಿಸಿ, ಮರುಬಳಕೆಗೆ ಅಣಿಗೊಳಿಸಲು ತೈವಾನ್‌ ಕಂಪನಿಗಳು ಆಸಕ್ತಿ ವ್ಯಕ್ತಪಡಿಸಿವೆ. ಇದರಿಂದ ಪರಿಸರಸ್ನೇಹಿ ಮತ್ತು ಸುಸ್ಥಿರ ಅಭಿವೃದ್ಧಿ ಸಾಧ್ಯವಾಗಲಿದ್ದು, ಈ ಸಂಬಂಧ ಸಾರಿಗೆ ಇಲಾಖೆಯ ಜತೆ ಮಾತನಾಡಿ ಸಂಪರ್ಕಸೇತುವಾಗಿ ಕೆಲಸ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ.

ರಾಜ್ಯದಲ್ಲಿ ಹೂಡಿಕೆ ಮಾಡುವ ಸಂಬಂಧ ಇಂದು ರಾಜ್ಯಕ್ಕೆ ಭೇಟಿ ನೀಡಿರುವ ತೈವಾನ್ ಇಂಡಿಯಾ ಬಿಝಿನೆಸ್‌ ಅಸೋಸಿಯೇಷನ್‌ನ(ಟಿಐಬಿಎ) 50ಕ್ಕೂ ಹೆಚ್ಚು ಹೂಡಿಕೆದಾರರ ಜತೆ ಮಾತುಕತೆ ನಡೆಸಿದ ನಂತರ ಸಚಿವರು ಈ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯದ ಉದ್ಯಮ ವಲಯ, ಕಾರ್ಯ ಪರಿಸರ, ಪ್ರೋತ್ಸಾಹಕ ಕ್ರಮಗಳು ಮತ್ತು ಸೌಲಭ್ಯಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಯಿತು.

"ಸದ್ಯಕ್ಕೆ ನಮ್ಮಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಇ.ವಿ. ಬಸ್ ಗಳನ್ನು ಓಡಿಸುತ್ತಿದ್ದೇವೆ‌. ಆದರೆ ಡೀಸೆಲ್‌ ಬಸ್ ಗಳನ್ನು ವಿದ್ಯುತ್ ಚಾಲಿತ ವಾಹನಗಳನ್ನಾಗಿ ಪರಿವರ್ತಿಸುವ ಕೆಲಸ ಆಗಬೇಕಾಗಿದೆ. ಇದು ಇವತ್ತಿನ ಅಗತ್ಯ ಕೂಡ. ನೀವು ಮುಂದೆ ಬರುವುದಾದರೆ ಸಾರಿಗೆ ಸಂಸ್ಥೆಗಳ ಜತೆ ಸಂಪರ್ಕ ಕಲ್ಪಿಸಲಾಗುವುದು" ಎಂದರು.

ಇದೇ ರೀತಿ ತುಮಕೂರು ಮಶೀನ್‌ ಟೂಲ್ಸ್‌ ಪಾರ್ಕ್(ಟಿಎಂಟಿಪಿ) ಅನ್ನು ಪುನಶ್ಚೇತನಗೊಳಿಸುವ ಮೂಲಕ ಲಾಭದಾಯಕವನ್ನಾಗಿ ಮಾಡಲು ತೀರ್ಮಾನಿಸಲಾಗಿದೆ. ಹಾಗೆಯೇ, ಎಲೆಕ್ಟ್ರಾನಿಕ್ಸ್‌ ಸಿಸ್ಟಂ ವಿನ್ಯಾಸ ಮತ್ತು ತಯಾರಿಕೆ(ಇಎಸ್‌ಡಿಎಂ) ಕಾರ್ಯ ಪರಿಸರವನ್ನು ವ್ಯಾಪಕಗೊಳಿಸುವ ಉದ್ದೇಶದಿಂದ ಮೈಸೂರಿನ ಕೋಚನಹಳ್ಳಿ ಮತ್ತು ಧಾರವಾಡದ ಕೋಟೂರು-ಬೇಲೂರು ಕೈಗಾರಿಕಾ ಪ್ರದೇಶಗಳಲ್ಲಿ ಇಎಂಸಿ 2.0 ಕ್ಲಸ್ಟರ್‍‌ಗಳನ್ನು ಸ್ಥಾಪಿಸಲಾಗುತ್ತಿದೆ. ಇದಕ್ಕಾಗಿ ತೈವಾನ್‌ ಕಂಪನಿಗಳ ಸಹಭಾಗಿತ್ವ ಹೊಂದುವ ಆಸಕ್ತಿ ಇದೆ ಎಂದು ಅವರು ತಿಳಿಸಿದರು. 

ಬೆಂಗಳೂರಿನ ಪೀಣ್ಯ, ಬೊಮ್ಮಸಂದ್ರ ಮತ್ತು ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿರುವ ಉದ್ದಿಮೆಗಳು ಮಶೀನ್‌ ಟೂಲ್‌ ತಯಾರಿಕೆಗೆ ಹೆಸರಾಗಿವೆ. ಜತೆಗೆ ಆಟೋಮೋಟಿವ್‌ ಮತ್ತು ವಾಹನ  ಬಿಡಿಭಾಗಗಳ ತಯಾರಿಕೆಯು ಮುಂಚೂಣಿಗೆ ಬರುತ್ತಿದೆ. ಇವೆಲ್ಲವೂ ತೈವಾನ್ ಮತ್ತು ಕರ್ನಾಟಕದ ಸಹಭಾಗಿತ್ವಕ್ಕೆ ಪ್ರಶಸ್ತವಾಗಿವೆ ಎಂದು ಅವರು ವಿವರಿಸಿದರು.

ಪರಿಸರಸ್ನೇಹಿ ತಂತ್ರಜ್ಞಾನ ಮತ್ತು ಮರುಬಳಕೆ ಮಾಡಬಹುದಾದ ಇಂಧನಗಳ ಉತ್ಪಾದನೆಯಲ್ಲೂ ರಾಜ್ಯವು ಹೆಜ್ಜೆ ಗುರುತುಗಳನ್ನು ಮೂಡಿಸುತ್ತಿದೆ. ಕರ್ನಾಟಕಲ್ಲಿ ಗ್ರೀನ್‌ ಹೈಡ್ರೋಜನ್‌, ಎಲೆಕ್ಟ್ರಾನಿಕ್ಸ್ ಸಿಸ್ಟಂ ವಿನ್ಯಾಸ ಮತ್ತು ತಯಾರಿಕೆ(ಇಎಸ್‌ಡಿಎಂ), ಏರೋಸ್ಪೇಸ್‌ ವಲಯಗಳು ಗಮನಾರ್ಹವಾಗಿದ್ದು, ದೇಶದಲ್ಲೇ ಅಗ್ರಸ್ಥಾನದಲ್ಲಿದ್ದೇವೆ. ಇದನ್ನು ತೈವಾನ್‌ ಹೂಡಿಕೆದಾರರ ಗಮನಕ್ಕೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್‌ ಕೃಷ್ಣ ಇದ್ದರು. ತೈವಾನ್‌ ನಿಯೋಗದಲ್ಲಿ ಜಾರ್ಜ್ ಎಲಿಯನ್‌, ಚೆನ್ನೈನ ಟಿಇಸಿಸಿ ಡೈರೆಕ್ಟರ್‍‌ ಜನರಲ್‌ ರಿಚರ್ಡ್ ಚೆನ್‌ ಮುಂತಾದವರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT