ಸಂಗ್ರಹ ಚಿತ್ರ 
ರಾಜ್ಯ

ಹಿಟ್ ಆ್ಯಂಡ್ ರನ್ ಪ್ರಕರಣ: ಗಾಯಗೊಂಡಿದ್ದ ಎಎಸ್ಐ ಚಿಕಿತ್ಸೆ ಫಲಿಸದೆ ಸಾವು

ಕರ್ತವ್ಯ ನಿರ್ವಹಣೆ ವೇಳೆ ಆಟೋರಿಕ್ಷಾ ಡಿಕ್ಕೆ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯ ಸಹಾಯ ಸಬ್ ಇನ್ಸ್'ಪೆಕ್ಟರ್ (ಎಎಸ್ಐ) ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಬೆಂಗಳೂರು: ಕರ್ತವ್ಯ ನಿರ್ವಹಣೆ ವೇಳೆ ಆಟೋರಿಕ್ಷಾ ಡಿಕ್ಕೆ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯ ಸಹಾಯ ಸಬ್ ಇನ್ಸ್'ಪೆಕ್ಟರ್ (ಎಎಸ್ಐ) ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಎಂ ನಾಗರಾಜು ಮೃತ ಎಎಸ್ಐ ಆಗಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕು ಮೂಲದವರಾಗಿದ್ದಾರೆ. ಭಾನುವಾರ ಮಧ್ಯಾಹ್ನ ಬಸವೇಶ್ವರ ವೃತ್ತದಲ್ಲಿ ಜರ್ಮನ್ ಚಾನ್ಸಲರ್ ಬೆಂಗಾವಲು ವಾಹನದ ಸಂಚಾರದ ವೇಳೆ ಟ್ರಾಫಿಕ್ ನಿರ್ವಹಿಸಲು ನಾಗರಾಜು ಅವರನ್ನು ನಿಯೋಜಿಸಲಾಗಿತ್ತು. ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಅವರಿಗೆ  ವೇಗವಾಗಿ ಬಂದ ಆಟೋ ರಿಕ್ಷಾವೊಂದು ರಭಸದಿಂದ ಡಿಕ್ಕಿ ಹೊಡೆದಿದೆ.

ಈ ವೇಳೆ 7-8 ಅಡಿ ಎತ್ತರಕ್ಕೆ ನಾಗರಾಜು ಅವರು ಹಾರಿ ಕೆಳಗೆ ಬಿದ್ದಿದ್ದಾರೆ. ಪರಿಣಾಮ ನಾಗರಾಜು ಅವರ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಚಿಕತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ,

ಘಟನೆ ಸಂಬಂಧ ಪೊಲೀಸರು ಇದೀಗ ಆಟೋ ಚಾಲಕನನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್