ಮಂಟಪದ ಮೇಲೆ ಹತ್ತಿ ಡ್ಯಾನ್ಸ್ ಮಾಡುತ್ತಿರುವ ಯುವಕ. 
ರಾಜ್ಯ

ರೀಲ್ಸ್'ಗಾಗಿ ಹಂಪಿ ಸ್ಮಾರಕದ ಮೇಲೆ ನೃತ್ಯ: ಯುವಕನ ಪತ್ತೆ ಹಚ್ಚಿದ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಸೂಚನೆ

ರೀಲ್ಸ್​ಗಾಗಿ ಹಂಪಿಯ 14ನೇ ಶತಮಾನದ ಸ್ಮಾರಕವನ್ನೇರಿ ನೃತ್ಯ ಮಾಡಿದ್ದ ಯುವಕನನ್ನು ಹಂಪಿ ಪೊಲೀಸರು ಪತ್ತೆ ಹಚ್ಚಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಹೊಸಪೇಟೆ: ರೀಲ್ಸ್​ಗಾಗಿ ಹಂಪಿಯ 14ನೇ ಶತಮಾನದ ಸ್ಮಾರಕವನ್ನೇರಿ ನೃತ್ಯ ಮಾಡಿದ್ದ ಯುವಕನನ್ನು ಹಂಪಿ ಪೊಲೀಸರು ಪತ್ತೆ ಹಚ್ಚಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ,

ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕನೊಬ್ಬ ಕುಣಿದು ಕುಪ್ಪಳಿಸುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಸಂಬಂಧ ಹಂಪಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಯುವಕನಿಗಾಗಿ ಹುಡುಕಾಟ ಆರಂಭಿಸಿದ್ದರು.

ಯುವಕ ಮಂಡ್ಯ ಜಿಲ್ಲೆಯ ನಿವಾಸಿಯಾಗಿದ್ದು, ಈತನಿಗೆ ತನಿಖೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆಂದು ವರದಿಗಳು ತಿಳಿಸಿವೆ.

ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ನಿಯಮಗಳ ಉಲ್ಲಂಘನೆಯಡಿ ಯುವಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಹಾಕುವ ಮೂಲಕ ಯುವಕ ಜನಪ್ರಿಯವಾಗಿದ್ದಾನೆ. ಸಾಮಾಜಿಕ ಜಾಲತಾಣಗಲ್ಲಿ ಪರಿಚಿತ ಮುಖವನ್ನೂ ಹೊಂದಿದ್ದಾನೆನ್ನಲಾಗಿದೆ.

ಯುವಕ ಇತ್ತೀಚೆಗಷ್ಟೇ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. ಇದಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿತ್ತು ಎಂದು ಹೇಳಲಾಗುತ್ತಿದೆ.

ಈಗಾಗಲೇ ತನಿಖೆಗೆ ಮಂಡ್ಯ ಪೊಲೀಸರ ನೆರವು ಕೇಳಲಾಗಿದ್ದು, ಯುವಕನ ಹೇಳಿಕೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಹಂಪಿಯ ಸೀನಿಯರ್ ಗೈಡ್ ಪ್ರಭು ಪಾಟೀಲ ಅವರು ಮಾತನಾಡಿ, ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡಿರುವುದು ಉತ್ತಮ ಕ್ರಮವಾಗಿದೆ. "ಹಂಪಿಗೆ ಬರುವ ಪ್ರವಾಸಿಗರು ಈ ಪ್ರದೇಶದ ಪಾವಿತ್ರ್ಯತೆ ಮತ್ತು ಇಲ್ಲಿ ನಿರ್ಮಿಸಲಾದ ನಿಯಮಗಳನ್ನು ಗೌರವಿಸುವುದನ್ನು ಕಲಿಯಬೇಕು. ಚಲನಚಿತ್ರ ಮತ್ತು ಸಾಕ್ಷ್ಯಚಿತ್ರಗಳಿಗೆ ಅನುಮತಿ ಕೇಳಿದರೆ, ಆದಕ್ಕೆ ಎಎಸ್‌ಐ ಠೇವಣಿ ಹಣವನ್ನು ತೆಗೆದುಕೊಳ್ಳುತ್ತದೆ. ಯಾವುದೇ ಸ್ಮಾರಕಕ್ಕೆ, ಯಾವುದೇ ರೀತಿಯ ಹಾನಿಯಾಗದಂತೆ ಚಿತ್ರೀಕರಣದ ಮೇಲ್ವಿಚಾರಣೆಗೆ ತಂಡವನ್ನು ನೇಮಿಸುತ್ತದೆ. ಹಂಪಿಯಲ್ಲಿ 2,500 ಕ್ಕೂ ಹೆಚ್ಚು ಸಣ್ಣ ಮತ್ತು ದೊಡ್ಡ ಕಲ್ಲುಗಳು, ದೇವಾಲಯಗಳು ಮತ್ತು ಶಾಸನಗಳಿವೆ ಮತ್ತು ಎಲ್ಲಾ ಪ್ರದೇಶಗಳಲ್ಲಿ ಭದ್ರತೆಯನ್ನು ನಿಯೋಜಿಸಲು ಸಾಧ್ಯವಾಗುವುದಿಲ್ಲ. ಇದನ್ನೇ ಬಳಸಿಕೊಂಡು ಯುವಕ ನಿಯಮಗಳನ್ನು ಉಲ್ಲಂಘಿಸಿ ವೀಡಿಯೋ ಮಾಡಿದ್ದೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT