ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ 
ರಾಜ್ಯ

ನಾವು ಅಧಿಕಾರಕ್ಕೆ ಬಂದ ಮೇಲೆ 7ನೇ ವೇತನ ಆಯೋಗ ಶಿಫಾರಸುಗಳನ್ನು ಜಾರಿಗೆ ತರುತ್ತೇವೆ: ಕಾಂಗ್ರೆಸ್ ನಾಯಕರ ಭರವಸೆ

ಬಿಜೆಪಿಯವರು ಮಾಡದಿದ್ದರೆ ನಾವು ಅಧಿಕಾರಕ್ಕೆ ಬಂದಾಗ 7ನೇ ವೇತನ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಕಾಂಗ್ರೆಸ್ ಘೋಷಿಸಿದೆ. 

ಬೆಳಗಾವಿ: ಬಿಜೆಪಿಯವರು ಮಾಡದಿದ್ದರೆ ನಾವು ಅಧಿಕಾರಕ್ಕೆ ಬಂದಾಗ 7ನೇ ವೇತನ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಕಾಂಗ್ರೆಸ್ ಘೋಷಿಸಿದೆ. 

7ನೇ ವೇತನ ಆಯೋಗದ ಮಧ್ಯಂತರ ಜಾರಿಗೆ ಆಗ್ರಹಿಸಿ ಇಂದು ಪ್ರತಿಭಟನೆ, ಸರ್ಕಾರ ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಒಪ್ಪಿ ಅಧಿಕೃತ ಆದೇಶ ಹೊರಡಿಸಿರುವ ಮಧ್ಯೆ ಬೆಳಗಾವಿಯಲ್ಲಿಂದು ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಒಂದು ವೇಳೆ ಬಿಜೆಪಿಯವರು ಮಾಡದೇ ಇದ್ದರೆ, ನಾವು ಅಧಿಕಾರಕ್ಕೆ ಬಂದು 7ನೇ ವೇತನ ಆಯೋಗ ವರದಿ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ. 

7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಸುಮ್ಮನೇ ದುಡ್ಡು ಇಟ್ಟಿದ್ದೀವಿ ಅಂತಾ ಹೇಳ್ತಾರೆ. ಎಲ್ಲಿ ದುಡ್ಡು‌ ಇಟ್ಟಿದ್ದಾರೆ? 7ನೇ ವೇತನ ಆಯೋಗ ವರದಿ ಜಾರಿಗೆ ಅಗತ್ಯ ಇರುವಷ್ಟು ದುಡ್ಡು ಇಟ್ಟಿಲ್ಲ. ಕೂಡಲೇ ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ವರದಿ ಜಾರಿ ಮಾಡಬೇಕಿತ್ತು ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಒಂದು ವೇಳೆ ಬಿಜೆಪಿಯವರು ಮಾಡದೇ ಹೋದ್ರೆ, ನಾವು ಬಂದ್ಮೇಲೆ ಮಾಡ್ತೀವಿ. ಐದು ವರ್ಷಗಳ ಹಿಂದೆ ನೌಕರರಿಗೆ ಆರನೇ ವೇತನ ಆಯೋಗ ಜಾರಿ ಮಾಡಿದ್ದೇನೆ. 10,600 ಕೋಟಿ ಹೊರೆಯಾದರೂ ನಾನು ಮಾಡಿದ್ದೆ. 6ನೇ ವೇತನ ಆಯೋಗ ವರದಿ ಅನೌನ್ಸ್ ಮಾಡಿದ್ದೆ. ಎಲೆಕ್ಷನ್‌ಗೂ ಮುನ್ನ ಜಾರಿಗೆ ತಂದಿದ್ದೇನೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸುಳ್ಳು ಹೇಳುತ್ತಾರೆ. ಸುಳ್ಳು ಹೇಳಿ ಮೂಗಿಗೆ ತುಪ್ಪ ಸವರೋದು ಇವರ ಕೆಲಸವಾಗಿದೆ ಎಂದು ಟೀಕಿಸಿದರು.

ಶೇ.17 ವೇತನ ಹೆಚ್ಚಿಸಿ ಸರ್ಕಾರ ಆದೇಶ ಕುರಿತು ಮಾತನಾಡಿ, ಅವರು ಹೇಳೋದು ಬೇಡ. ಮಧ್ಯಂತರ ವರದಿ ಜನರ ಮುಂದೆ ಇಡಬೇಕು. ಹಳೆಯ ಪಿಂಚಣಿ ವ್ಯವಸ್ಥೆ ನಿನ್ನೆ ಮೊನ್ನೆಯದ್ದಲ್ಲ. ಅದರ ಬಗ್ಗೆ ಚರ್ಚೆ ಮಾಡಬೇಕು. ಹಳೆಯ ಪಿಂಚಣಿ ವ್ಯವಸ್ಥೆ ಬಗ್ಗೆ 7ನೇ ವೇತನ ಆಯೋಗದ ಅಧ್ಯಕ್ಷರು ಎಕ್ಸಾಮಿನ್ ಮಾಡಬೇಕು ಎಂದು ಹೇಳಿದರು.

ನಾವು ವರದಿ ಜಾರಿ ಮಾಡುತ್ತೇವೆ: ನಾವು ಸರ್ಕಾರಿ ನೌಕರರ ಪರವಾಗಿ ಇದ್ದೇವೆ. ಕಾಂಗ್ರೆಸ್ ಖಂಡಿತ ಅಧಿಕಾರಕ್ಕೆ ಬರುತ್ತೆ ಯಾರಿಗೂ ಅನುಮಾನ ಬೇಡ. ನಾವು ಅದಿಕಾರಕ್ಕೆ ಬಂದ ಕೂಡಲೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುತ್ತೇವೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar)​​ ಹೇಳಿದ್ದಾರೆ. ಏಳನೇ ವೇತನ ಆಯೋಗ ಜಾರಿ ಮಾಡಲು ನಮ್ಮ ಪಕ್ಷ ಬದ್ಧವಾಗಿದೆ. ಇದೊಂದು ಭ್ರಷ್ಟ ಸರ್ಕಾರ, ಎಲ್ಲ ಕಡೆಯೂ ಭ್ರಷ್ಟಾಚಾರ ಹೆಚ್ಚಾಗಿದೆ. ಹೋರಾಟ ನಿಮ್ಮ ಹಕ್ಕು, ನೌಕರರು ಕೇಳುತ್ತಿರುವುದು ಸರಿಯಾಗಿ ಇದೆ ಎಂದು ಹಾಸನದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ