ಸಂಗ್ರಹ ಚಿತ್ರ 
ರಾಜ್ಯ

ಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಎಂದ ಅಜೀಂ ಪ್ರೇಮ್​ ಜಿ ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದನ್ನು ಸುಳ್ಳು ಎಂದ ಅಜಿಂ ಪ್ರೇಮ್​ ಜಿ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದನ್ನು ಸುಳ್ಳು ಎಂದ ಅಜಿಂ ಪ್ರೇಮ್​ ಜಿ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ದಿನಗಳಿಂದ ಕ್ಯಾಂಪಸ್ ಒಳಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ವಿವಿ ಆಡಳಿತ ಮಂಡಳಿ ಸ್ಪಂದಿಸದ ಹಿನ್ನೆಲೆ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನೂ ಆರಂಭಿಸಿದ್ದರು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಭಿಜಿತ್ ಎಂಬ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿದ್ದ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಅಜಿಂ ಪ್ರೇಮ್​ ಜಿ ವಿವಿ, ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಮೃತಪಟ್ಟಿರುವುದು ದುರದೃಷ್ಟಕರ ಸಂಗತಿ. ಘಟನೆಯಿಂದ ನಾವು ಆಘಾತಕ್ಕೊಳಗಾಗಿದ್ದೇವೆ ಮತ್ತು ತೀವ್ರ ದುಖಃವಾಗಿದೆ. ಆದರೆ, ವಿದ್ಯಾರ್ಥಿ ಉಪವಾಸ ಪ್ರತಿಭಟನೆಯಲ್ಲಿ ಮೃತಪಟ್ಟಿಲ್ಲ. ವಿದ್ಯಾರ್ಥಿ ಉಪವಾಸ ಸತ್ಯಗ್ರಹ ವೇಳೆ ಮೃತಪಟ್ಟಿದ್ದಾನೆ ಎನ್ನುವುದು ಸುಳ್ಳು ಎಂದು ಹೇಳಿತ್ತು. ಈ ಹೇಳಿಕೆಗೆ ಇದೀಗ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!