ರಾಜ್ಯ

ಟೆಂಡರ್ ಗಾಗಿ ಲಂಚ: 40 ಲಕ್ಷ ರೂ. ನಗದು ಹಣದೊಂದಿಗೆ ಲೋಕಾಯುಕ್ತಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪುತ್ರ!

Vishwanath S

ಬೆಂಗಳೂರು: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್‌ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. 

ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದು ಟೆಂಡರ್ ಕೊಡಿಸುವ ವಿಚಾರದಲ್ಲಿ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್) ರಾಸಾಯನಿಕ ಪೂರೈಸುವ ಟೆಂಡರ್ ನೀಡುವ ಸಲುವಾಗಿ 81 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದು ಮುಂಗಡವಾಗಿ  40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಕೆಎಸ್​ಡಿಎಲ್​ ಟೆಂಡರ್​ ಸಂಬಂಧ ಖಾಸಗಿ ವ್ಯಕ್ತಿಯೋರ್ವ ಇಂದು ಬೆಳಗ್ಗೆ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದೂ ಈ ದೂರಿನನ್ವಯ FIR ದಾಖಲಿಸಿ ದಾಳಿ ಮಾಡಲಾಗಿತ್ತು. ದಾಳಿಯಲ್ಲಿ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಶಾಸಕ ವಿರೂಪಾಕ್ಷಪ್ಪ ಕಚೇರಿಯಲ್ಲಿ ಮೂರು ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿವೆ. 

SCROLL FOR NEXT