ತುಷಾರ್ ಗಿರಿನಾಥ್ 
ರಾಜ್ಯ

ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಇ-ಆಸ್ತಿ ತಂತ್ರಾಂಶ ಅಳವಡಿಸಲು ಕ್ರಮ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು ಪೂರ್ವದಲ್ಲಿ ಆರಂಭವಾಗಿರುವ ‘ಇ-ಅಸ್ತಿ’ ತಂತ್ರಾಂಶವನ್ನು ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ಹೇಳಿದರು.

ಬೆಂಗಳೂರು: ಬೆಂಗಳೂರು ಪೂರ್ವದಲ್ಲಿ ಆರಂಭವಾಗಿರುವ ‘ಇ-ಅಸ್ತಿ’ ತಂತ್ರಾಂಶವನ್ನು ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ಹೇಳಿದರು.

ನಿನ್ನೆಯಷ್ಟೇ ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ ರಾಯ್ಪುರ ಅವರು ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್'ನ್ನು ಮಂಡನೆ ಮಾಡಿದರು.

ಬಜೆಟ್ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ತುಷಾರ್ ಗಿರಿನಾಥ್ ಅವರು, ಆಸ್ತಿ ತೆರಿಗೆ ಹೆಚ್ಚಳ ಮಾಡಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಖಾತಾ ಮೇಳ ನಡೆಸಲಾಗುತ್ತಿದೆ. ಕ್ರಯ ಪತ್ರ ನೋಂದಣಿಗೆ ಅವಕಾಶ ಮಾಡಿಕೊಡುವುದಕ್ಕಾಗಿ ನಗರದ ಪೂರ್ವ, ಪಶ್ಚಿಮ ಹಾಗೂ ದಕ್ಷಿಣ ವಲಯಗಳಲ್ಲಿ ಇ - ಆಸ್ತಿ ತಂತ್ರಾಂಶ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬಿ ಖಾತೆಯ ನಿವೇಶನಗಳಿಗೆ ಎ ಖಾತೆ ನೀಡುವ ಯೋಜನೆ ವರ್ಷಾಂತ್ಯದಲ್ಲಿ ತೆಗೆದುಕೊಳ್ಳಲಾಗಿದೆ. ಇದರಿಂದ ಪಾಲಿಕೆಗೆ ಈ ವರ್ಷ 300 ಕೋಟಿ ರೂ ಆದಾಯ ಬರುವ ನಿರೀಕ್ಷೆಯಿದೆ. 2023-24ನೇ ವರ್ಷದಲ್ಲಿ 800 ಕೋಟಿ ರೂ ಆದಾಯ ನಿರೀಕ್ಷೆಯಿದೆ ಎಂದು ತಿಳಿಸಿದರು.

ಬಳಿಕ ಮಾತನಾಡಿ ಜಯರಾಮ್ ರಾಯ್ಪರ ಅವರು, 2022ರಲ್ಲಿ 3,758 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರೂ.4,412 ಕೋಟಿ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ. ಆಸ್ತಿ ತೆರಿಗೆ ಸಂಗ್ರಹದಲ್ಲಿ 24 ಶೇಕಡಾರಷ್ಟು ಹೆಚ್ಚಳವಾಗಿದ್ದು, ನಮ್ಮ ಗುರಿಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಇದೀಗ ಶೇ.27ರಷ್ಟು ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.

243 ವಾರ್ಡ್ ಗಳು ರಚನೆಯಾಗಿದ್ದು, ನಾಗರೀಕ ಕಾಮಗಾರಿಗೆ ಪ್ರತಿ ವಾರ್ಡ್ ಗೆ 2 ಕೋಟಿ ರೂಪಾಯಿಯನ್ನು ನೀಡಲಾಗಿದೆ. ಬಿಬಿಎಂಪಿಯೊಂದಿಗೆ ವಿಲೀನಗೊಂಡ 110 ಗ್ರಾಮಗಳಿಗೆ ರೂ.300 ಕೋಟಿ ಮೀಸಲಿಡಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು