ರಾಜ್ಯ

ಲೋಕಾಯುಕ್ತ ದಾಳಿ: ಶಾಸಕ ಪುತ್ರನ ಕಚೇರಿ-ನಿವಾಸದಲ್ಲಿ ಸಿಕ್ಕಿದ್ದು 8 ಕೋಟಿ ರೂ. ಗೂ ಅಧಿಕ ನಗದು, ಸಿಎಂ ಹೇಳಿದ್ದೇನು?

Sumana Upadhyaya

ಬೆಂಗಳೂರು: ಗುತ್ತಿಗೆದಾರರಿಂದ 40 ಲಕ್ಷ ಲಂಚ ಪಡೆದು ಸಿಕ್ಕಿಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಪ್ರಶಾಂತ್‌ ಕುಮಾರ್‌ ಮನೆಯಲ್ಲಿ ಲೋಕಾಯುಕ್ತ ಪೊಲೀಸರು 6 ಕೋಟಿ 10 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಅವರ ಕಚೇರಿಯಲ್ಲಿ 2 ಕೋಟಿ 2 ಲಕ್ಷ ರೂಪಾಯಿ ಪತ್ತೆಯಾಗಿದೆ. 

ಲೋಕಾಯುಕ್ತ ಮೂಲಗಳ ಪ್ರಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ(BWSSB) ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್ ಅವರು ನಿನ್ನೆ ಗುರುವಾರ ಸಂಜೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿಮಿಟೆಡ್ (KSDL) ಕಚೇರಿಯಲ್ಲಿ ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಬಿಜೆಪಿ ಶಾಸಕ ವಿರೂಪಾಕಾಶಪ್ಪ ಅವರು ಕೆಎಸ್‌ಡಿಎಲ್‌ನ ಅಧ್ಯಕ್ಷರಾಗಿದ್ದು, ಪ್ರಶಾಂತ್ ತಮ್ಮ ತಂದೆಯ ಪರವಾಗಿ ಲಂಚದ ಮೊದಲ ಕಂತು ಪಡೆಯುತ್ತಿದ್ದರು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಕೆಎಸ್‌ಡಿಎಲ್‌ ಕಚೇರಿಯಲ್ಲಿ ಮೂರು ಬ್ಯಾಗ್‌ಗಳಲ್ಲಿ ನಗದು ತುಂಬಿರುವುದು ಪೊಲೀಸರಿಗೆ ಸಿಕ್ಕಿದೆ.

ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿ ಮಾಡಾಳ್ ಪ್ರಶಾಂತ್ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ ಸಂದರ್ಭದ ವಿಡಿಯೊ @XpressBengaluru @MadalVirupaksh2 @BJP4Karnataka pic.twitter.com/GO4w879Eg5

ಲೋಕಾಯುಕ್ತರು ಪ್ರಶಾಂತ್ ಸಿಕ್ಕಿಬಿದ್ದ ತಕ್ಷಣ ಅವರ ಮನೆ ಮೇಲೆ ದಾಳಿ ನಡೆಸಿ ಇಂದು ಶುಕ್ರವಾರವೂ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಲೋಕಾಯುಕ್ತ ಮೂಲಗಳು ಶುಕ್ರವಾರ ಪ್ರಶಾಂತ್ ಅವರ ಮನೆಯಲ್ಲಿ ಆರು ಕೋಟಿ ರೂಪಾಯಿಗೂ ಅಧಿಕ ನಗದು ವಶಪಡಿಸಿಕೊಂಡಿದ್ದಾರೆ. 

ಸಾಬೂನು ಮತ್ತು ಡಿಟರ್ಜೆಂಟ್ ಉತ್ಪಾದನೆಗೆ ಕೆಎಸ್‌ಡಿಎಲ್‌ಗೆ ಅಗತ್ಯವಿರುವ ರಾಸಾಯನಿಕಗಳನ್ನು ಪೂರೈಸಿದ ಗುತ್ತಿಗೆದಾರರಿಂದ ಲಂಚ ಪಡೆಯುವಾಗ ಪ್ರಶಾಂತ್ ಸಿಕ್ಕಿಬಿದ್ದಿದ್ದಾರೆ. ಶಾಸಕರ ಪುತ್ರ 81 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದು, ಮೊದಲ ಕಂತಾಗಿ 40 ಲಕ್ಷ ರೂಪಾಯಿಗಳನ್ನು ನಿನ್ನೆ ಸ್ವೀಕರಿಸುತ್ತಿದ್ದರು. 

ಗುತ್ತಿಗೆದಾರರು ವಾರದ ಹಿಂದೆಯೇ ಬಿಜೆಪಿ ಶಾಸಕರು ಮತ್ತು ಅವರ ಪುತ್ರ ಅಧಿಕಾರಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಲೋಕಾಯುಕ್ತರ ಮೊರೆ ಹೋಗಿದ್ದು, ರೆಡ್ ಹ್ಯಾಂಡ್ ಆಗಿ ಹಿಡಿಯಲು ಸಮಯ ಕಾಯುತ್ತಿದ್ದರು. 

ಬಿಜೆಪಿ ಲೋಕಾಯುಕ್ತವನ್ನು ಪುನರುಜ್ಜೀವನಗೊಳಿಸಿದೆ ಎಂದು ಈ ದಾಳಿಯಲ್ಲಿ ಸಾಬೀತು: ಈ ಮಧ್ಯೆ ಶಾಸಕ ಪುತ್ರನ ಬಂಧನದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಭ್ರಷ್ಟಾಚಾರವನ್ನು ತಡೆಯಲು ಲೋಕಾಯುಕ್ತವನ್ನು ಪುನರುಜ್ಜೀವನಗೊಳಿಸಲಾಗಿದೆ ಎಂಬುದಕ್ಕೆ ಈ ದಾಳಿ ಸಾಕ್ಷಿಯಾಗಿದೆ, ಹಿಂದಿನ ಕಾಂಗ್ರೆಸ್ ಸರ್ಕಾರದ ಆಡಳಿತವು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಲೋಕಾಯುಕ್ತ ಸಂಸ್ಥೆಯನ್ನು ಹೊರತುಪಡಿಸಿ ಪ್ರತ್ಯೇಕ ಭ್ರಷ್ಟಾಚಾರ ನಿಗ್ರಹ ದಳವನ್ನು ರಚಿಸಿತ್ತು. 

ಈ ಹಿಂದೆ ಪ್ರಬಲ ಲೋಕಾಯುಕ್ತರ ಕೊರತೆಯಿಂದಾಗಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಹಲವು ಭ್ರಷ್ಟಾಚಾರ ಪ್ರಕರಣಗಳ ತನಿಖೆಯೇ ಆಗಲಿಲ್ಲ ಎಂದು  ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಲ್ಲಿ ಮಾತನಾಡುತ್ತಾ ಆರೋಪಿಸಿದರು. 

ನಿಷ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದು ಪದೇ ಪದೇ ಹೇಳುತ್ತಲೇ ಬಂದಿದ್ದೇವೆ, ಈ ಪ್ರಕರಣದಲ್ಲಿ ಸ್ವತಂತ್ರ ಲೋಕಾಯುಕ್ತ ಸಂಸ್ಥೆ ನಿಷ್ಪಕ್ಷಪಾತ ತನಿಖೆ ನಡೆಸುತ್ತದೆ ಮತ್ತು ಯಾರೇ ತಪ್ಪು ಮಾಡಿದ್ದರೂ ಕ್ರಮ ಎದುರಿಸಬೇಕಾಗುತ್ತದೆ ಎಂಬುದು ನಮ್ಮ ನಿಲುವು, ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು. 

"ಎಲ್ಲಾ ಮಾಹಿತಿ ಮತ್ತು ಅಲ್ಲಿ ಸಿಕ್ಕಿರುವ ಹಣ ಎಲ್ಲವೂ ಈಗ ಲೋಕಾಯುಕ್ತರ ಬಳಿ ಇದೆ. ಸ್ವತಂತ್ರ ಮತ್ತು ಸಮರ್ಥನೀಯ ತನಿಖೆ ನಡೆಯಲಿ. ಅದು ಯಾರ ಹಣ ಮತ್ತು ಯಾವ ಉದ್ದೇಶಕ್ಕಾಗಿ ತರಲಾಗಿದೆ ಎಂಬಂತೆ ಸತ್ಯ ಹೊರಬರಬೇಕು ಎಂಬುದು ನಮ್ಮ ಉದ್ದೇಶ" ಎಂದು ಸಿಎಂ ಅವರು ಹೇಳಿದರು.

ಪ್ರಸ್ತುತ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂಬುದಕ್ಕೆ ಈ ಘಟನೆ ಸಾಕ್ಷಿ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆಗೆ ಸಂಬಂಧಿಸಿದಂತೆ ಬೊಮ್ಮಾಯಿ, ಕಾಂಗ್ರೆಸ್ ಶಾಸಕರು ಮತ್ತು ಸಚಿವರ ಮೇಲೆ ಅನೇಕ ಭ್ರಷ್ಟಾಚಾರ ಆರೋಪಗಳಿವೆ ಆದರೆ ಅವರು ಭ್ರಷ್ಟಾಚಾರ ನಿಗ್ರಹ ದಳವನ್ನು ರಚಿಸಿ ಮುಚ್ಚಿಹಾಕಿದ್ದಾರೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹಲವು ಭ್ರಷ್ಟಾಚಾರ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ನೀಡಲಾಗಿದ್ದು, ತನಿಖೆ ನಡೆಸಿ ಸತ್ಯಾಂಶ ಹೊರತರಲಿದೆ ಎಂದರು.

ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು ಕರ್ನಾಟಕ ವಿಧಾನಸಭೆಯಲ್ಲಿ ಎಸಿಬಿಯನ್ನು ಮುಂದುವರಿಸಬೇಕು ಎಂದು ಹೇಳಿದ್ದರು ಎಂದು ಆರೋಪಿಸಿರುವ ಮುಖ್ಯಮಂತ್ರಿ, ಅವರ ಉದ್ದೇಶವೇನು ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಅವರು ಜಾರ್ಜ್ ಯಾರ ಪರವಾಗಿದ್ದಾರೆ, ಈ ಪ್ರಕರಣದ ಆಧಾರದ ಮೇಲೆ ಅವರು ಸ್ವಚ್ಛ ಜನರು ಎಂದು ತೋರಿಸಲು ಸಾಧ್ಯವಿಲ್ಲ. ಅವರ ವಿರುದ್ಧ ಸಾಕಷ್ಟು ಪ್ರಕರಣಗಳಿವೆ, ಪ್ರಕರಣಗಳು ತನಿಖೆಯಲ್ಲಿವೆ, ನಾವು ಎಲ್ಲಾ ಪ್ರಕರಣಗಳನ್ನು ನೀಡುತ್ತೇವೆ ಎಂದು ಹೇಳಿದರು. 

SCROLL FOR NEXT